Close Menu
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
Facebook X (Twitter) Instagram
Saturday, January 17
Facebook X (Twitter) Instagram LinkedIn VKontakte
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
You are at:Home » Blog » ಭದ್ರ ಯೋಜನೆಗೆ ಭೂಮಿ ನೀಡಲು ಆಕ್ಷೇಪ ವ್ಯಕ್ತಪಡಿಸಿದ್ದ ನಾಲ್ವರು ರೈತರನ್ನು ಮನವೊಲಿಸಿದ:ಮಾಜಿ ಸಚಿವ ಹೆಚ್.ಆಂಜನೇಯ
Uncategorized

ಭದ್ರ ಯೋಜನೆಗೆ ಭೂಮಿ ನೀಡಲು ಆಕ್ಷೇಪ ವ್ಯಕ್ತಪಡಿಸಿದ್ದ ನಾಲ್ವರು ರೈತರನ್ನು ಮನವೊಲಿಸಿದ:ಮಾಜಿ ಸಚಿವ ಹೆಚ್.ಆಂಜನೇಯ

KumarBy KumarSeptember 7, 2025No Comments2 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email
Spread the love

ಕ್ಷೇತ್ರದ ಜನಜೀವನ ಸುಧಾರಿಸಲು ಚಿಕ್ಕಜಾಜೂರು ಸೇರಿ 30 ಕೆರೆಗಳಿಗೆ ಭದ್ರೆ ನೀರು ತುಂಬಿದರೆ ಜನಜಾನುವಾರುಗಳಿಗೆ ಕುಡಿಯುವ ನೀರಿಗೆ ಶಾಶ್ವತ ಪರಿಹಾರ ದೊರೆಯುತ್ತದೆ

ಭದ್ರ ಯೋಜನೆಗೆ ಭೂಮಿ ನೀಡಲು ಆಕ್ಷೇಪ ವ್ಯಕ್ತಪಡಿಸಿದ್ದ ನಾಲ್ವರು ರೈತರನ್ನು ಮನವೊಲಿಸಿದ:ಮಾಜಿ ಸಚಿವ ಹೆಚ್.ಆಂಜನೇಯ

ರೈತರ ಬದುಕು ಹಸನುಗೊಳಿಸುವ ಪ್ರಯತ್ನಕ್ಕೆ ರೈತರು ಬೆಂಬಲವಾಗಿ ನಿಲ್ಲಬೇಕು

 ಸಂಪಾದಕರು: ಸಿ.ಎನ್.ಕುಮಾರ್,

ಚಿತ್ರದುರ್ಗ ಹೊಯ್ಸಳ ನ್ಯೂಸ್ /

ಹೊಳಲ್ಕೆರೆ:

ನನ್ನ ಕ್ಷೇತ್ರದಲ್ಲಿ ತಾಳ್ಯ ಗ್ರಾಮ ಸೇರಿ ಹೆಚ್ಚುವರಿ ಗ್ರಾಮಗಳ ಸೇರ್ಪಡೆಯೊಂದಿಗೆ 30 ಕೆರೆಗಳನ್ನು ಭದ್ರೆ ನೀರಿನಿಂದ ತುಂಬಿಸಲು ಒಟ್ಟು 200 ಕೋಟಿ ರೂ.ವೆಚ್ಚದಲ್ಲಿ ಕೆಲಸ ನಡೆಯುತ್ತಿದೆ. ತಾಲ್ಲೂಕಿನಲ್ಲಿ ಕೃಷಿ ಚಟುವಟಿಕೆ ಗರಿಗೆದರುವ ಜೊತೆಗೆ ರೈತರ ಬದುಕು ಹಸನುಗೊಳಿಸುವ ಪ್ರಯತ್ನಕ್ಕೆ ರೈತರು ಬೆಂಬಲವಾಗಿ ನಿಲ್ಲಬೇಕು. ಎಂದು ಭದ್ರಾಮೇಲ್ದಂಡೆ ಕಾಮಗಾರಿಯ ಪೈಪ್‌ಲೈನ್ ಹಾಗೂ ನೀರು ಸಂಗ್ರಹ ಟ್ಯಾಂಕ್ ನಿರ್ಮಾಣಕ್ಕೆ ಭೂಮಿ ನೀಡಲು ಆಕ್ಷೇಪ ವ್ಯಕ್ತಪಡಿಸಿದ್ದ ನಾಲ್ವರು ರೈತರನ್ನು ಮನವೊಲಿಸುವಲ್ಲಿ ಮಾಜಿ ಸಚಿವ ಹೆಚ್.ಆಂಜನೇಯ ಯಶಸ್ವಿಯಾಗಿದ್ದಾರೆ.

ತಾಲೂಕಿನ ಗಂಗಸಮುದ್ರ ಗ್ರಾಮದಲ್ಲಿ ಭದ್ರಾಮೇಲ್ದಂಡೆ ಯೋಜನೆ ಕಾಮಗಾರಿ ಸ್ಥಳಕ್ಕೆ ಮಾಜಿ ಸಚಿವ ಹೆಚ್.ಆಂಜನೇಯ ನವರು ಶನಿವಾರ ಭೇಟಿ ನೀಡಿ,ಕಾಮಗಾರಿ ವೀಕ್ಷಿಸಿದ ಬಳಿಕ ಅಧಿಕಾರಿಗಳು ಹಾಗೂ ರೈತರೊಂದಿಗೆ ಚರ್ಚಿಸಿದರು. ಆರಂಭದಲ್ಲಿ ನಾಲ್ವರು ರೈತರು ನಮಗೆ ಸೂಕ್ತ ಪರಿಹಾರ ನೀಡಬೇಕೆಂದು ಪಟ್ಟು ಹಿಡಿದರು.ಜೊತೆಗೆ ಅನೇಕ ಬೇಡಿಕೆಗಳನ್ನು ಮುಂದಿಟ್ಟರು. ಎಲ್ಲ ಮಾತುಗಳನ್ನು ಆಲಿಸಿದ ಆಂಜನೇಯ ಅವರು, ಭದ್ರಾ ಮೇಲ್ದಂಡೆ ಯೋಜನೆ ವ್ಯಾಪ್ತಿಯಿಂದ ಹೊಳಲ್ಕೆರೆ ತಾಲ್ಲೂಕು ಕೈಬಿಟ್ಟು ಹೋಗಿತ್ತು. ಇದನ್ನು ಪ್ರಶ್ನೀಸಿ ಯಾರೊಬ್ಬರೂ ಧ್ವನಿಯೆತ್ತಲಿಲ್ಲ. ಆದರೆ, ನಾನು ಸಮಾಜ ಕಲ್ಯಾಣ ಸಚಿವನಾಗಿದ್ದ ಸಂದರ್ಭ ಮುಖ್ಯಮಂತ್ರಿ ಅವರನ್ನು ಒಪ್ಪಿಸಿ ಯೋಜನೆ ವ್ಯಾಪ್ತಿಗೆ ಹೊಳಲ್ಕೆರೆ ತಾಲ್ಲೂಕನ್ನು ಸೇರ್ಪಡೆ ಮಾಡಿದೆ ಎಂದು ರೈತರಿಗೆ ಮನಮುಟ್ಟುವಂತೆ ಅರ್ಥೈಸಿದ್ದರು.

ಜೊತೆಗೆ 110 ಕೋಟಿ ರೂ. ವೆಚ್ಚದಲ್ಲಿ 22 ಕೆರೆಗಳಿಗೆ ಭದ್ರೆ ನೀರು ತುಂಬಿಸುವ ಮಹತ್ವದ ಯೋಜನೆಗೆ ಟೆಂಡರ್ ಪ್ರಕ್ರಿಯೆ ನಡೆಸಿ, ಕಾಮಗಾರಿ ಆರಂಭಿಸಲಾಗಿತ್ತು. ಆದರೆ, ಈ ಯೋಜನೆ ಪೂರ್ಣಗೊಂಡಲ್ಲಿ ಮಾಜಿ ಸಚಿವ ಹೆಚ್.ಆಂಜನೇಯ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಹೆಸರು ಬರಲಿದೆ ಎಂದು ಕೆಲವರು ಅನಗತ್ಯವಾಗಿ ಕಾಮಗಾರಿ ಮಂದಗತಿ ಆಗುವ ರೀತಿ ಷಡ್ಯಂತರ ನಡೆಸಿದರು ಎಂದು ದೂರಿದರು.

ಆದರೂ ಈ ಯೋಜನೆ ತ್ವರಿತಗತಿಯಲ್ಲಿ ಸಾಗಲು ಅನುದಾನ, ತಾಂತ್ರಿಕ ಸೇರಿ ಎಲ್ಲ ರೀತಿ ಸಮ್ಮತಿ ಸರ್ಕಾರದಿಂದ ಒಪ್ಪಿಗೆ ತರುವಲ್ಲಿ ಶ್ರಮಿಸಿದ್ದೇನೆ. ಜೊತೆಗೆ ಯಾವೊಬ್ಬ ರೈತರಿಗೂ ಪರಿಹಾರದಲ್ಲಿ ಅನ್ಯಾಯವಾಗದ ರೀತಿ ಒತ್ತಡ ತಂದಿರುವೆ. ಆದರೆ, ನಾಲ್ವರು ರೈತರು ಆಕ್ಷೇಪ ವ್ಯಕ್ತ ಪಡಿಸಿರುವುದರಿಂದ ಮಹತ್ವದ ಯೋಜನೆಗೆ ಅಡ್ಡಿಯಾಗಿದೆ. ಸರ್ಕಾರದ ನೀತಿ ನಿಯಮದಂತೆ ನಿಮಗೆ ಸೂಕ್ತ ಪರಿಹಾರ ಕೊಡಿಸಲಾಗುವುದು ಎಂದರು.

ತಕ್ಷಣ ಭೂಮಿ ನೀಡಲು ಆಕ್ಷೇಪ ವ್ಯಕ್ತಪಡಿಸಿದ್ದ ರೈತರು ಯೋಜನೆ ಕಾಮಗಾರಿಗೆ ಭೂಮಿ ನೀಡುವುದಾಗಿ ವಾಗ್ದಾನ ನೀಡಿದರು.

ಈ ವೇಳೆ ರೈತರನ್ನು ಅಭಿನಂದಿಸಿ ಮಾತನಾಡಿದ ಆಂಜನೇಯ, ಅರೆಮಲೆನಾಡು ಎಂಬ ಖ್ಯಾತಿಯ ಹೊಳಲ್ಕೆರೆ ಈಚೆಗೆ ಬರಗಾಲಕ್ಕೆ ತುತ್ತಾಗುತ್ತಿದೆ. ಇದರಿಂದ ಹೊರಬರಲು ಭದ್ರಾ ಮೇಲ್ದಂಡೆ ಯೋಜನೆ ಸಹಕಾರಿ ಆಗಲಿದೆ. ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ಶಾಶ್ವತ ಪರಿಹಾರ ದೊರಕಿಸಲಿದೆ. ಅಂತರ್ಜಲ ಹೆಚ್ಚಿಸಿ, ಕೊಳವೆ ಬಾವಿಗಳಲ್ಲಿ ನೀರು ಹೆಚ್ಚಲಿದೆ. ಈ ಕಾರ್ಯಕ್ಕೆ ಭೂಮಿ ನೀಡುವ ರೈತರ ಉದಾರತೆಗೆ ನಾವೆಲ್ಲರೂ ಕೃತಜ್ಞರಾಗಿರುತ್ತೇವೆ.

ಈ ಮೂಲಕ ತಾಲ್ಲೂಕಿನಲ್ಲಿ ಕೃಷಿಕರು ಆರ್ಥಿಕವಾಗಿ ಸಬಲರಾಗಲಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಭದ್ರಾ ಮೇಲ್ದಂಡೆ ಮುಖ್ಯ ಕಾಲುವೆಯಿಂದ ಗಂಗಸಮುದ್ರದಲ್ಲಿನ ಟ್ಯಾಂಕ್‌ಗೆ ನೀರು ಹರಿದುಬರಲಿದ್ದು, ದೇವರಹೊಸಹಳ್ಳಿ, ತಾಳಿಕಟ್ಟೆ, ದುಮ್ಮಿ, ಕೆಂಗುಂಟೆ , ರಂಗಾಪುರ, ಹನುಮಲಿ,ಆರ್.ನುಲೇನೂರು, ಚಿಕ್ಕಜಾಜೂರು ಸೇರಿ 30 ಕೆರೆಗಳಿಗೆ ಭದ್ರೆ ನೀರು ತುಂಬಲಿದ್ದು, ಈ ಮೂಲಕ ಕ್ಷೇತ್ರದ ಜನಜೀವನ ಸುಧಾರಿಸಲಿದೆ ಎಂದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ವಿಜಯಕುಮಾರ್, ಭದ್ರಾ ಮೇಲ್ದಂಡೆ ಯೋಜನೆಯ ಎಇಇ ನಾಗರಾಜ್, ಎಇ ಕಿರಣ್,ತಾಪಂ ಇಒ ವಿಶ್ವನಾಥ್, ಸರ್ಕಲ್ ಇನ್ಸಪೆಕ್ಟರ್ ಚಿಕ್ಕಣ್ಣನವರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಟಿ.ಹನುಮಂತಪ್ಪ,ಜಿಪಂ ಮಾಜಿ ಸದಸ್ಯರಾದ ಶಿವಕುಮಾರ್ಶಿವಪುರ, ಬಿ.ಗಂಗಾಧರ್, ಡಿ.ಕೆ.ಶಿವಮೂರ್ತಿ,ಎಂಜಿ ಲೋಹಿತ್ ಕುಮಾರ್, ರಂಗಸ್ವಾಮಿ,ತಾಪಂ ಮಾಜಿ ಸದಸ್ಯರಾದ ರಾಮಚಂದ್ರಪ್ಪ,ಎಂ.ಎಸ್.ನಾಗಪ್ಪ, ನಾಗಣ್ಣ, ಹಾಲಿ ಮತ್ತು ಮಾಜಿ ಗ್ರಾ.ಪಂ ಸದಸ್ಯರು, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರು ಮುತ್ತುಗದೂರು ರುದ್ರಣ್ಣ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು,ಉಪಾಧ್ಯಕ್ಷರು ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email
Previous Articleರಾಜಕೀಯ ಲಾಭಕ್ಕಾಗಿ ಒಳಮೀಸಲಾತಿ ಜಾರಿ,ಸಿದ್ದರಾಮಯ್ಯರಿಂದ ಸಾಮಾಜಿಕ ಅನ್ಯಾಯ:ಬಸವರಾಜ ಬೊಮ್ಮಾಯಿ
Next Article ಇಸ್ರೇಲ್ ವಿದೇಶಾಂಗ ಕಾರ್ಯದರ್ಶಿ ಭೇಟಿ ಮಾಡಿದ ಪತ್ರಕರ್ತರ ನಿಯೋಗ : ಶಿವಾನಂದ ತಗಡೂರು
Kumar
  • Website

Related Posts

13 Olimp Com Mobile – мобильный игровой сервис, который меняет правила игры в Казахстане

January 17, 2026

ಚಕ್ರಗಳೇ ಇಲ್ಲದ ಬಸ್‌ಗೆ ಫಿಟ್‌ನೆಸ್! ಸಾರಿಗೆ ಇಲಾಖೆಯೊಳಗಿನ ಸಂಧಿ ಬಯಲು ಮಾಡಿದ ದಾಖಲೆ

January 17, 2026

Roulette Bonus Live: Das ultimative Spielerlebnis für Roulette-Fans

January 17, 2026
Leave A Reply Cancel Reply

Search
Tags
Amazing gadgets Apartment guides Beauty essentials Biggest fashion angel Brave Business Business insurances Business schools Celebrity photos Cheapest flights Civil societies culture Culture tips Electronic gadgets Fashion Fashion shows Feature featured fitness Flight scanners Food Good stock quotes Interview questions leisure Lifestyle Link Luxury homes Makeup artists Music Open source software Pretty dresses Preventative medicines Sports Staff Pick Stockcharts Studio apartments Tech Tech reviews Topic Trending Trip activities Unbelievable home decor Vaccination schedules Weight loss meal plans Weight loss supplements

Corporate clients and leisure travelers has been relying on Groundlink for dependable safe, and professional chauffeured car end service in major cities across World.

  • Facebook
  • Twitter
  • Instagram
  • Pinterest
Don't Miss

13 Olimp Com Mobile – мобильный игровой сервис, который меняет правила игры в Казахстане

ಚಕ್ರಗಳೇ ಇಲ್ಲದ ಬಸ್‌ಗೆ ಫಿಟ್‌ನೆಸ್! ಸಾರಿಗೆ ಇಲಾಖೆಯೊಳಗಿನ ಸಂಧಿ ಬಯಲು ಮಾಡಿದ ದಾಖಲೆ

Roulette Bonus Live: Das ultimative Spielerlebnis für Roulette-Fans

The Rise of Online Casinos: Trends and Insights

ಚಿತ್ರದುರ್ಗ ಹೊಯ್ಸಳ ನ್ಯೂಸ್ – ಚಿತ್ರದುರ್ಗ ಜಿಲ್ಲೆಯ ತಾಜಾ ಸುದ್ದಿಗಳು, ರಾಜಕೀಯ, ಸಮಾಜ, ಸಂಸ್ಕೃತಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ಬೆಳವಣಿಗೆಗಳನ್ನು ತಲುಪಿಸುವ ವಿಶ್ವಾಸಾರ್ಹ ಕನ್ನಡ ಸುದ್ದಿ ಜಾಲತಾಣ.

Popular Posts

13 Olimp Com Mobile – мобильный игровой сервис, который меняет правила игры в Казахстане

January 17, 2026

ಚಕ್ರಗಳೇ ಇಲ್ಲದ ಬಸ್‌ಗೆ ಫಿಟ್‌ನೆಸ್! ಸಾರಿಗೆ ಇಲಾಖೆಯೊಳಗಿನ ಸಂಧಿ ಬಯಲು ಮಾಡಿದ ದಾಖಲೆ

January 17, 2026

Roulette Bonus Live: Das ultimative Spielerlebnis für Roulette-Fans

January 17, 2026
Copyright © 2026 CHITRADURGA HOYSALA. Designed by WEBBRAHMA.
  • About
  • Contact
  • Advertise
  • Terms
  • FAQ
  • Policy

Type above and press Enter to search. Press Esc to cancel.