April 30, 2024

Chitradurga hoysala

Kannada news portal

ಜಿಲ್ಲೆಯಲ್ಲಿ 245 ಜನರಿಗೆ ಕೋವಿಡ್ ಸೋಂಕು ದೃಢ : ಸೋಂಕಿತರ ಸಂಖ್ಯೆ 4,544ಕ್ಕೆ ಏರಿಕೆ

1 min read
covid cases

ಚಿತ್ರದುರ್ಗ, ಸೆಪ್ಟೆಂಬರ್11:
   ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಶುಕ್ರವಾರದ ವರದಿಯಲ್ಲಿ 245 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4,544ಕ್ಕೆ ಏರಿಕೆಯಾದಂತಾಗಿದ್ದು, ಇಬ್ಬರು ಮೃತಪಟ್ಟ ಪ್ರಕರಣ ವರದಿಯಾಗಿದೆ.  
 ಚಿತ್ರದುರ್ಗ ತಾಲ್ಲೂಕಿನಲ್ಲಿ 125, ಚಳ್ಳಕೆರೆ 26, ಹಿರಿಯೂರು 19, ಹೊಸದುರ್ಗ 33, ಮೊಳಕಾಲ್ಮುರು 10 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 32 ಸೇರಿದಂತೆ ಒಟ್ಟು 245 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
 ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಶುಕ್ರವಾರ 632 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಶುಕ್ರವಾರ ಒಟ್ಟು 811 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 245 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 4,544ಕ್ಕೆ ಏರಿಕೆಯಾಗಿದ್ದು, ಇದುವರೆಗೆ 35 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 3,508 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1001 ಸಕ್ರಿಯ ಪ್ರಕರಣಗಳು ಇವೆ.
  ಸದ್ಯ ಜಿಲ್ಲೆಯಲ್ಲಿ ಒಟ್ಟು 922 ಕಂಟೈನ್ಮೆಂಟ್ ವಲಯಗಳಿವೆ.  ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 33,165 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

  ಈವರೆಗೆ 47,152 ಜನರ ಮಾದರಿ ಸಂಗ್ರಹಿಸಲಾಗಿದ್ದು, 40,978 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 1,187 ಜನರ ವರದಿ ಬರುವುದು ಬಾಕಿ ಇದೆ. 443 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *