ಗ್ರಾ.ಪಂ.ನೂತನ ಉಪಾಧ್ಯಕ್ಷೆಯಾಗಿ ಯಲ್ಲಮ್ಮ ಅವಿರೋಧವಾಗಿ ಆಯ್ಕೆ

ಬೇಡರೆಡ್ಡಿ ಗ್ರಾಮಪಂಚಾಯಿಗೆ ನೂತನ ಉಪಾಧ್ಯಕ್ಷರಾಗಿ ಯಲ್ಲಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ತಾಲೂಕಿನ ಬೇಡರಡ್ಡಿಹಳ್ಳಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ತೆರವಾಗಿದ್ದ ಸ್ಥಾನಕ್ಕೆ ಚುನಾವಣಾಧಿಕಾರಿ ಹಾಗೂ ತಾಪಂ ಇಒ ಶಶಿಧರ್ ಇವ ನೇತೃತ್ವದಲ್ಲಿ ನಡೆದ ಉಪಾಧ್ಯಕ್ಷರ ಚುನಾವಣೆಗೆ ಯಲ್ಲಮ್ಮ ವಿರುದ್ದ ಯಾರೂ ನಾಮಪತ್ರ ಸಲ್ಲಿಸದ ಕಾರಣ ಯಲ್ಲಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಿದರು.
ಯಲ್ಲಮಮ್ಮ ಉಪಾಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿದ ನಂತರ ಮಾತನಾಡಿ ನನಗೆ ಅವುರೋಧವಾಗಿ ಆಯ್ಕೆ ಮಾಡಿದ ಗ್ರಾಪಂ ಅಧ್ಯಕ್ಷ ಹಾಗೂ ಸದಸ್ಯರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಅರುಣ್ ಕುಮಾರ್. ಸದಸ್ಯರು ಹಾಗೂ ತಾಪಂ ಸಹಾಯಕ ನಿರ್ದೇಶಕ ಸಂಪತ್ ಕುಮಾರ್. ಇತರರಿದ್ದರು.
