ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯಕ್ಕೆ ಆಂಧ್ರ ಪ್ರದೇಶ ರಾಜ್ಯದ ಶಿಕ್ಷಣ ಸಚಿವರಾದ ನಾರ ಲೋಕೇಶ್ ಭೇಟಿ
ಚಿತ್ರದುರ್ಗ ಹೊಯ್ಸಳ ನ್ಯೂಸ್ /
ವರದಿ : ವಿಜಯಕುಮಾರ್ ತೊಡರನಾಳ್
ನಾಗಮಂಗಲ:
ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಶ್ರೀ ಕ್ಷೇತ್ರ ಆದಿಚುಂಚನಗಿರಿ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯಕ್ಕೆ ಭಾನುವಾರ ಆಂಧ್ರ ಪ್ರದೇಶ ರಾಜ್ಯದ ಶಿಕ್ಷಣ ಸಚಿವರಾದ ನಾರ ಲೋಕೇಶ್ ಅವರು ಭೇಟಿ ನೀಡಿ ಕ್ಷೇತ್ರಾದಿ ದೇವತೆಗಳ ಹಾಗೂ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳವರ ಗದ್ದುಗೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಡಾ. ನಿರ್ಮಲಾನಂದ ಸ್ವಾಮೀಜಿ ಗಳ ಆಶೀರ್ವಾದ ಪಡೆದರು. ಈ ವೇಳೆ ಪ್ರಸನ್ನಾನಂದ ಸ್ವಾಮೀಜಿ ಸೇರಿದಂತೆ ಹಲವು ಗಣ್ಯರು ಇದ್ದರು.