ಸಕಾಲಕ್ಕೆ ಬಡವರಿಗೆ ಅಕ್ಕಿ ನೀಡದೇ, ಎಬ್ಬೆಟ್ಟು ಪಡೆದು ವಂಚನೆ ಆರೋಪ, ಕಣ್ಮುಚ್ಚಿ ಕುಳಿತ ಅಧಿಕಾರಿಗಳು
ಚಿತ್ರದುರ್ಗ ಹೊಯ್ಸಳ ನ್ಯೂಸ್/
ಚಳ್ಳಕೆರೆ:
ಕಾಂಗ್ರೆಸ್ ಪಕ್ಷದ ಸರ್ಕಾರ ರಾಜ್ಯದಲ್ಲಿ ಬಡ ಜನರು ಹಸಿವಿನಿಂದ ಅನ್ನಸಿಗದೆ ಬದುಕಬಾರದು ಎಂದು ಅನ್ನಭಾಗ್ಯ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ಜಾರಿಗೆ ತಂದರು ಸಹ ನ್ಯಾಯ ಬೆಲೆ ಅಂಗಡಿ ಮಾಲೀಕರು ಸಕಾಲಕ್ಕೆ ಪಡಿತರರಿಗೆ ಅಕ್ಕಿ ನೀಡದೇ, ಎಬ್ಬೆಟ್ಟು ಪಡೆದು ವಂಚನೆ ಮಾಡುತ್ತಿರುವ ಆರೋಪ ಕೇಳಿ ಬಂದಿದೆ
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ರಂಗವ್ವನಹಳ್ಳಿ ಗ್ರಾಮದಲ್ಲಿ ಪಡಿತರ ಅಂಗಡಿಯಲ್ಲಿ ಅನ್ನಭಾಗ್ಯ ಅಕ್ಕಿಯನ್ನು ಫಲಾನುಭವಿಗಳಿಗೆ ವಿತರಣೆ ಮಾಡದೇ ವಂಚನೆ ಮಾಡಲಾಗುತ್ತಿದೆ ಪಡಿತರ ಅಕ್ಕಿ ಬಂದು ಐದು ದಿನ ಕಳೆದು ಡಿಸೆಂಬರ್ ತಿಂಗಳು ಮುಗಿಯುತ್ತಾ ಬಂದರು ಅಕ್ಕಿಗಾಗಿ ಬೆಳಿಗ್ಗೆಯಿಂದ ಸಂಜೆವರೆಗೆ ಕೆಲಸ ಕಾರ್ಯ ಬಿಟ್ಟು ಕಾಯುವ ಪರಿಸ್ಥಿತಿ ಉಂಟಾಗಿದೆ.
ಗ್ರಾಮದಲ್ಲಿ ಪ್ರತಿ ತಿಂಗಳು ಸುಮಾರು 20ರಿಂದ 30 ಫಲಾನುಭವಿಗಳಿಗೆ ಅಕ್ಕಿ ನೀಡದೇ, ಎಬ್ಬೆಟ್ಟು ಪಡೆದುಕೊಂಡು ಕೂಡ ಪಡಿತರ ವಿತರಣೆ ಮಾಡುತ್ತಿಲ್ಲ ವೆಂದು. ಕ್ಷೇತ್ರದ ಶಾಸಕರು ಹಾಗೂ ಸಂಬಂಧಿಸಿದ ಆಹಾರ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಇದುವರೆಗೆ ಯಾವುದೇ ಕ್ರಮ ಕೈ ಗೊಂಡಿಲ್ಲ ಎಂದು ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶಕ್ಕೆ ವ್ಯಕ್ತಪಡಿಸಿದ್ದಾರೆ.
ಈಗಲಾದರೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ತಕ್ಷಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈ ಗೊಂಡು ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆ ತಲುಪಿಸುವರೆ ಎಂದು ಕಾದು ನೋಡಬೇಕಿದೆ.
