Close Menu
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
Facebook X (Twitter) Instagram
Monday, July 6
Facebook X (Twitter) Instagram LinkedIn VKontakte
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
You are at:Home » Blog » *ಕ್ರೀಡೆಯಿಂದ ಶಿಸ್ತು, ಚಾರಿತ್ರ್ಯ ಬರುತ್ತದೆ:ಬಸವರಾಜ ಬೊಮ್ಮಾಯಿ*
Uncategorized

*ಕ್ರೀಡೆಯಿಂದ ಶಿಸ್ತು, ಚಾರಿತ್ರ್ಯ ಬರುತ್ತದೆ:ಬಸವರಾಜ ಬೊಮ್ಮಾಯಿ*

KumarBy KumarJanuary 30, 2026No Comments2 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email
Spread the love

ಕ್ರೀಡೆ ಆಡುವವರು ದೈಹಿಕವಾಗಿ ಮಾನಸಿಕವಾಗಿ ಆರೋಗ್ಯವಾಗಿರುತ್ತಾರೆ:ಬಸವರಾಜ ಬೊಮ್ಮಾಯಿ

ಕ್ರೀಡೆಯಿಂದ ಶಿಸ್ತು, ಚಾರಿತ್ರ್ಯ ಬರುತ್ತದೆ:ಬಸವರಾಜ ಬೊಮ್ಮಾಯಿ

ಚಿತ್ರದುರ್ಗ ಹೊಯ್ಸಳ ನ್ಯೂಸ್/

ಹಾವೇರಿ(ಹಾನಗಲ್):

ಜೀವನದಲ್ಲಿ ಯಾರು ಕ್ರೀಡೆಯನ್ನು ಮುಂದುವರೆಸಿಕೊಂಡು ಹೋಗುತ್ತಾರೆ. ಅವರು ದೈಹಿಕವಾಗಿ ಮಾನಸಿಕವಾಗಿ ಆರೋಗ್ಯಕರವಾಗಿರುತ್ತಾರೆ. ಅಷ್ಟೇ ಅಲ್ಲ ಎಂಥ ಸಂದರ್ಭದಲ್ಲಿಯೂ ಸುಖ ದುಖವನ್ನು ಸಮನಾಗಿ ತೆಗೆದುಕೊಂಡು ಹೋಗುವ ಚೈತನ್ಯ ಕ್ರೀಡಾ ಮನೋಭಾವದಿಂದ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ಹಾವೇರಿ ಜಿಲ್ಲೆಯ ಹಾನಗಲ್ಲ ನಗರದ ಜನತಾ ಶಿಕ್ಷಣ ಸಂಸ್ಥೆಯ ಕಾಲೇಜು ಮೈದಾನದಲ್ಲಿ ಏರ್ಪಡಿಸಿದ *ಸಂಸದ ಕ್ರೀಡಾ ಮಹೋತ್ಸವ 2025-26* ರ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ಕ್ರೀಡೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಬಹಳ ಮುಖ್ಯ. ಸಣ್ಣವರಿದ್ದಾಗ ಎಲ್ಲರೂ ಒಂದಿಲ್ಲಾ ಒಂದು ಕ್ರೀಡೆಯಲ್ಲಿ ತೊಡಗಿಸಿಕೊಂಡಿರುತ್ತೇವೆ. ಆದರೆ, ಅದನ್ನು ಮುಂದುವರೆಸಿಕೊಂಡು ಹೋಗುವುದಿಲ್ಲ. ಕ್ರೀಡೆಯೊಂದಿಗಿನ ನಂಟು ಜೀವನದ ಅರ್ಧದಲ್ಲಿಯೇ ನಿಂತು ಹೋಗುತ್ತದೆ. ಯಾರು ಅದನ್ನು ಮುಂದುವರೆಸಿಕೊಂಡು ಹೋಗುತ್ತಾರೆ. ಅವರು ದೈಹಿಕವಾಗಿ ಮಾನಸಿಕವಾಗಿ ಆರೋಗ್ಯಕರವಾಗಿರುತ್ತಾರೆ. ಅಷ್ಟೇ ಅಲ್ಲ ಎಂಥ ಸಂದರ್ಭದಲ್ಲಿಯೂ ಸುಖ ದುಖವನ್ನು ಸಮನಾಗಿ ತೆಗೆದುಕೊಂಡು ಹೋಗುವ ಚೈತನ್ಯ ಕ್ರೀಡಾ ಮನೋಭಾವದಿಂದ ಬರುತ್ತದೆ ಎಂದು ಹೇಳಿದರು.

ಕ್ರೀಡೆಗೆ ವಯಸ್ಸಿನ ಸಂಬಂಧ ಇಲ್ಲ ಅಂತ ಇಲ್ಲಿಗೆ ಬಂದಾಗ ಗೊತ್ತಾಯಿತು. ವೈಭವಿ ಮಹಿಳಾ ಮಂಡಳದವರು ಸ್ಫೂರ್ತಿಯಿಂದ, ಬಹಳ ಉತ್ಸಾಹದಿಂದ ಆಡಿದರು. ಮನಸಿದ್ದರೆ ಕ್ರೀಡೆಯನ್ನು ಯಾವ ವಯಸ್ಸಿನಲ್ಲಿಯಾದರೂ ಆಡಬಹದು ಎನ್ನುವುದನ್ನು ತೋರಿಸಿಕೊಟ್ಟಿದ್ದೀರಿ, ಇಡೀ ದಿನ ಎಲ್ಲರೂ ಸಕ್ರೀಯರಾಗಿ ಕ್ರೀಡೆಯಲ್ಲಿ ಪಾಲ್ಗೊಂಡಿದ್ದಾರೆ. ನಿಜವಾಗಲೂ ಬಹಳ ಸಂತೋಷವಾಗಿದೆ ಎಂದು ಹೇಳಿದರು.

ಕ್ರೀಡೆ ಜೀವನಕ್ಕೆ ಬಹಳ ಹತ್ತಿರ. ಸೋಲಬಾರದು ಎಂದು ಆಡುವುದು ಅಂದರೆ, ಒಂದು ರಕ್ಷಣಾತ್ಮಕ ಆಟ, ಇನ್ನೊಂದು ಗೆಲ್ಲಲೇಬೇಕೆಂದು ಆಡುವುದು ಆಕ್ರಮಣಕಾರಿ ಆಟ, ಬದುಕಿನಲ್ಲಿ ಗೆಲ್ಲಲೇಬೇಕೆಂದು ಆಟ ಆಡಬೇಕು ಅಂದಾಗ ಮಾತ್ರ ಯಶಸ್ಸು ಸಿಗುತ್ತದೆ. ಸಕಾರಾತ್ಮಕ ಮನಸ್ಸು, ಕಠಿಣ ಪರಿಶ್ರಮ, ಗುರಿ ಇದ್ದರೆ ಯಶಸ್ಸು ಸಾಧ್ಯ. ಕ್ರೀಡೆಯಿಂದ ಶಿಸ್ತು, ಚಾರಿತ್ರ್ಯ ಬರುತ್ತದೆ. ಅದಕ್ಕೆ ನಮ್ಮ ಪ್ರಧಾನಿ ನರೇಂದ್ರ ಮೋದಿಯವರು ಕ್ರೀಡೆಗೂ ಅಷ್ಟೇ ಮಹತ್ವ ಕೊಟ್ಟಿದ್ದಾರೆ. ಮೊದಲು ಫಿಟ್ ಇಂಡಿಯಾ ಅಂತ ಹೇಳಿದರು. ನಂತರ ಖೇಲೋ ಇಂಡಿಯಾ ಅಂದರು, ಓಲಿಂಪಿಕ್ಸ್ ಬಂದಾಗ ಜೀತೋ ಇಂಡಿಯಾ ಅಂತ ಹೇಳಿದರು. ಅದರ ಪರಿಣಾಮ ಟೊಕಿಯೋ ಓಲಿಂಪಿಕ್ಸ್‌ನಲ್ಲಿ ಭಾರತ ಹಿಂದೆಂದಿಗಿಂತಲೂ ಹೆಚ್ಚು ಪದಕಗಳನ್ನು ಗೆಲ್ಲಲು ಸಾಧ್ಯವಾಯಿತು. ಪ್ಯಾರಾ ಓಲಿಂಪಿಕ್ಸ್‌ನಲ್ಲಿ ಭಾರತದ ಕ್ರೀಡಾಪಟುಗಳು ಅತಿ ಹೆಚ್ಚು ಪದಕ ಗೆದಿದ್ದಾರೆ. ಸಂಸದರ ಕ್ರೀಡಾ ಮಹೋತ್ಸವ ಬಹಳ ಯಶಸ್ವಿಯಾಗಿ ಜಿಲ್ಲೆಯಾದ್ಯಂತ ಕ್ರೀಡಾ ಸ್ಫೂರ್ತಿಯನ್ನು ಹುಟ್ಟು ಹಾಕಿದೆ. ಮುಂದಿನ ವರ್ಷ ದೊಡ್ಡ ಪ್ರಮಾಣದಲ್ಲಿ ಪ್ರಚಾರ ಕೊಟ್ಟು ಒಳ್ಳೆಯ ರೀತಿಯಲ್ಲಿ ಕ್ರೀಡೆ ಆಡೋಣ ಎಂದು ಹೇಳಿದರು.

ಈ ಕ್ರೀಡೆ ಅತ್ಯಂತ ಯಶಸ್ವಿಯಾಗಲು ಕಾರಣರಾಗಿರುವ ಪಕ್ಷದ ಎಲ್ಲ ಮುಖಂಡರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಕ್ರೀಡಾಪಟುಗಳು, ರೆಫ್ರಿಯಾಗಿ ಬಂದಿರುವ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಈ ಸಂಧರ್ಭದಲ್ಲಿ ಮಾಜಿ ಶಾಸಕರಾದ ಶಿವರಾಜ ಸಜ್ಜನ, ಭಾರತೀಯ ಜನತಾ ಪಕ್ಷದ ಮಂಡಳದ ಅಧ್ಯಕ್ಷರಾದ ಮಹೇಶಕುಮಾರ ಕಮಡೊಳ್ಳಿ, ಮುಖಂಡರುಗಳಾದ ಪದ್ಮನಾಭ ಕುಂದಾಪೂರ, ಬಿ.ಎಸ್ ಅಕ್ಕಿವಳ್ಳಿ, ಭೋಜರಾಜ ಕರೂದಿ, ಕಲ್ಯಾಣಕುಮಾರ ಶೆಟ್ಟರ, ರಾಘವೇಂದ್ರ ತಹಶಿಲ್ದಾರ, ಮಾಲತೇಶ ಸೊಪ್ಪಿನ, ಕೃಷ್ಣಾ ಇಳಿಗೇರ, ರಾಜಶೇಖರಗೌಡ ಕಟ್ಟೆಗೌಡ್ರ, ಚಂದ್ರಪ್ಪ ಹರಿಜನ, ಸಿದ್ದಲಿಂಗಪ್ಪ ಕಮಡೊಳ್ಳಿ, ಶಿವಲಿಂಗಪ್ಪ ತಲ್ಲೂರ ಸೇರಿದಂತೆ ಹಲವಾರು ಪ್ರಮುಖರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email
Previous Articleದೇವರೆಡ್ಡಿಹಳ್ಳಿ ಗ್ರಾಮ ಪಂಚಾಯಿತಿ ಆಯವ್ಯಯಕ್ಕೆ ಅನುಮೋದನೆ
Next Article Those Who Play Sports Remain Physically and Mentally Healthy: MP Basavaraj Bommai
Kumar
  • Website

Related Posts

Hexa Bet Casino im Test: Schwerpunkt auf Zahlungen

July 6, 2026

Boho Casino Test: Spiele, Boni & Auszahlungen

July 5, 2026

Ivibet Casino im Test: Spiele, Boni & Auszahlungen

July 2, 2026
Leave A Reply Cancel Reply

Search
Tags
Amazing gadgets Apartment guides Biggest fashion angel Brave Business Business insurances Business schools casino 770 Cheapest flights click here culture Culture tips Electronic devices Fashion Feature featured fitness Flight scanners Food Good stock quotes Hotel deals Interview questions Kingmaker Casino leisure Lifestyle Link Makeup artists Music Open source software Rock fame Sports Staff Pick Stockcharts Studio apartments Tech Tech reviews Topic Tower Rush Travel packages Trending Trip activities VoltageBet bonus review VoltageBet crypto deposits VoltageBet deposit bonus VoltageBet PayPal casino

Corporate clients and leisure travelers has been relying on Groundlink for dependable safe, and professional chauffeured car end service in major cities across World.

  • Facebook
  • Twitter
  • Instagram
  • Pinterest
Don't Miss

Hexa Bet Casino im Test: Schwerpunkt auf Zahlungen

Boho Casino Test: Spiele, Boni & Auszahlungen

Ivibet Casino im Test: Spiele, Boni & Auszahlungen

Boho Casino im Test: Spiele, Boni und Auszahlung

ಚಿತ್ರದುರ್ಗ ಹೊಯ್ಸಳ ನ್ಯೂಸ್ – ಚಿತ್ರದುರ್ಗ ಜಿಲ್ಲೆಯ ತಾಜಾ ಸುದ್ದಿಗಳು, ರಾಜಕೀಯ, ಸಮಾಜ, ಸಂಸ್ಕೃತಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ಬೆಳವಣಿಗೆಗಳನ್ನು ತಲುಪಿಸುವ ವಿಶ್ವಾಸಾರ್ಹ ಕನ್ನಡ ಸುದ್ದಿ ಜಾಲತಾಣ.

Popular Posts

Hexa Bet Casino im Test: Schwerpunkt auf Zahlungen

July 6, 2026

Boho Casino Test: Spiele, Boni & Auszahlungen

July 5, 2026

Ivibet Casino im Test: Spiele, Boni & Auszahlungen

July 2, 2026
Copyright © 2026 CHITRADURGA HOYSALA. Designed by WEBBRAHMA.
  • About
  • Contact
  • Advertise
  • Terms
  • FAQ
  • Policy

Type above and press Enter to search. Press Esc to cancel.