ಮನೆ ಆವರಣದಲ್ಲಿದ್ದ ಗ್ಯಾಸ್ ಸಿಲಿಂಡರ್ ಕಳ್ಳತನ: ಸಿಸಿಟಿವಿಯಲ್ಲಿ ಸೆರೆ
ಚಿತ್ರದುರ್ಗ ಹೊಯ್ಸಳ
ಚಳ್ಳಕೆರೆ:
ಚಳ್ಳಕೆರೆ ನಗರದ ಚಿತ್ರದುರ್ಗ ರಸ್ತೆಯ ತ್ಯಾಗರಾಜ್ ನಗರದಲ್ಲಿ ಮಾಜಿ ನಗರಸಭೆ ಸದಸ್ಯ ರಾಘವೇಂದ್ರ ಅವರಿಗೆ ಸೇರಿದ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.
ಮನೆಯ ಆವರಣದಲ್ಲಿ ಇಡಲಾಗಿದ್ದ ಗ್ಯಾಸ್ ಸಿಲಿಂಡರ್ ಅನ್ನು ದುಷ್ಕರ್ಮಿಗಳು ರಾತ್ರೋರಾತ್ರಿ ಕದ್ದೊಯ್ದಿದ್ದು, ಕಳ್ಳತನದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ರಾತ್ರಿ ವೇಳೆ ನಡೆದ ಈ ಕೃತ್ಯದಿಂದ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿದೆ.
ಘಟನೆ ಕುರಿತು ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು. ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳ ಪತ್ತೆಗೆ ಚಳ್ಳಕೆರೆ ಪೊಲೀಸರು ಮುಂದಾಗಿದ್ದಾರೆ.
