Close Menu
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
Facebook X (Twitter) Instagram
Wednesday, July 8
Facebook X (Twitter) Instagram LinkedIn VKontakte
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
You are at:Home » Blog » ನೀಟ್’ ಪ್ರಶ್ನೆಪತ್ರಿಕೆ ಸೋರಿಕೆ: ಹೊಳಲ್ಕೆರೆಯಲ್ಲಿ ಯುವ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ
Uncategorized

ನೀಟ್’ ಪ್ರಶ್ನೆಪತ್ರಿಕೆ ಸೋರಿಕೆ: ಹೊಳಲ್ಕೆರೆಯಲ್ಲಿ ಯುವ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

KumarBy KumarMay 19, 2026No Comments2 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email
Spread the love

‘ನೀಟ್’ ಪ್ರಶ್ನೆಪತ್ರಿಕೆ ಸೋರಿಕೆ: ಹೊಳಲ್ಕೆರೆಯಲ್ಲಿ ಯುವ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

ಚಿತ್ರದುರ್ಗ ಹೊಯ್ಸಳ:

​ಹೊಳಲ್ಕೆರೆ:

ಕರ್ನಾಟಕ ಪ್ರದೇಶ್ ಯುವ ಕಾಂಗ್ರೆಸ್ ಸಮಿತಿಯ ಆದೇಶದ ಮೇರೆಗೆ, ಮಾಜಿ ಸಚಿವ ಹೆಚ್.ಆಂಜನೇಯ ಅವರ ಮಾರ್ಗದರ್ಶನದಲ್ಲಿ ಹೊಳಲ್ಕೆರೆ ವಿಧಾನಸಭಾ ಯುವ ಕಾಂಗ್ರೆಸ್ ಹಾಗೂ ಹೊಳಲ್ಕೆರೆ ಮತ್ತು ಭರಮಸಾಗರ ಯುವ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ‘ನೀಟ್’ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ವಿರೋಧಿಸಿ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಪರವಾಗಿ ಹೊಳಲ್ಕೆರೆ ಪಟ್ಟಣದ ಮುಖ್ಯ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
​ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವೈಫಲ್ಯ ಮತ್ತು ಪರೀಕ್ಷಾ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರದ ವಿರುದ್ಧ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
​ *ಪಾರದರ್ಶಕತೆ ಕಾಯ್ದುಕೊಳ್ಳುವಲ್ಲಿ ಕೇಂದ್ರ ವಿಫಲ:ಹೆಚ್.ಟಿ ಹನುಮಂತಪ್ಪ*
​ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಹೊಳಲ್ಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಟಿ ಹನುಮಂತಪ್ಪ, “ನೀಟ್ ಪರೀಕ್ಷೆಯಂತಹ ದೇಶದ ಮಹತ್ವದ ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು ಅತ್ಯಂತ ಆಘಾತಕಾರಿ. ಕೇಂದ್ರ ಸರ್ಕಾರ ಪರೀಕ್ಷಾ ವ್ಯವಸ್ಥೆಯನ್ನು ಪಾರದರ್ಶಕವಾಗಿ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಈ ಹಗರಣದ ಹಿಂದೆ ಬಿಜೆಪಿ ಯುವ ಮೋರ್ಚಾದ ಸದಸ್ಯರ ಜಾಲ ಸಕ್ರಿಯವಾಗಿದ್ದು, ಸುಪ್ರೀಂಕೋರ್ಟ್ ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆಯಾಗಬೇಕು” ಎಂದು ಆಗ್ರಹಿಸಿದರು.
​ *ಶಿಕ್ಷಣ ಮಂತ್ರಿಯನ್ನು ವಜಾ ಮಾಡಿ:* ಪವನ್ ಹೆಚ್.ಪಿ
​ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಪವನ್ ಹೆಚ್.ಪಿ ಮಾತನಾಡಿ, “ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ದೇಶದ ಶಿಕ್ಷಣ ವ್ಯವಸ್ಥೆಗೆ ದುರ್ಗತಿ ಬಂದಿದೆ. ಪದೇ ಪದೇ ಪೇಪರ್ ಲೀಕ್ ಆಗುತ್ತಿದ್ದರೂ ಪ್ರಧಾನಿ ಮೋದಿ ಮೌನವಾಗಿದ್ದಾರೆ. ಶಿಕ್ಷಣ ಮಂತ್ರಿ ಧರ್ಮೇಂದ್ರ ಪ್ರಧಾನ್ ಅವರು ಕನಿಷ್ಠ ಜವಾಬ್ದಾರಿಯನ್ನೂ ಹೊರುತ್ತಿಲ್ಲ. ನರೇಂದ್ರ ಮೋದಿ ಅವರಿಗೆ ದೇಶದ ಯುವಕರ ಬಗ್ಗೆ ಕಾಳಜಿ ಇದ್ದರೆ, ಅಯೋಗ್ಯ ಶಿಕ್ಷಣ ಮಂತ್ರಿಯನ್ನು ಕೂಡಲೇ ವಜಾ ಮಾಡಬೇಕು” ಎಂದು ಒತ್ತಾಯಿಸಿದರು.
*​ಇದು ಆತ್ಮಹತ್ಯೆಯಲ್ಲ, ಸರ್ಕಾರದ ಕೊಲೆ: ಚೇತನ್ ಹೆಚ್.*
​ಹೊಳಲ್ಕೆರೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಹೆಚ್. ಮಾತನಾಡಿ, “ಬಿಜೆಪಿಯ ದಳ್ಳಾಳಿಗಳು ಭಾರತದ ಯುವಜನರ ಭವಿಷ್ಯವನ್ನು ಹಾಳು ಮಾಡಲು ನಿಂತಿದ್ದಾರೆ. ನೀಟ್ ಪರೀಕ್ಷೆಯ ಪೇಪರ್ ಲೀಕ್‌ನಿಂದಾಗಿ ನೊಂದು ನಾಲ್ಕು ಜನ ಅಮಾಯಕ ವಿದ್ಯಾರ್ಥಿಗಳು ಪ್ರಾಣ ತೆತ್ತಿದ್ದಾರೆ. ಇದು ಆತ್ಮಹತ್ಯೆಯಲ್ಲ, ಕೇಂದ್ರ ಸರ್ಕಾರದ ದುರಾಡಳಿತ ನಡೆಸಿದ ಕೊಲೆ” ಎಂದು ಗಂಭೀರವಾಗಿ ಆರೋಪಿಸಿದರು.
​
ಪ್ರತಿಭಟನೆಯಲ್ಲಿ ಭರಮಸಾಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮುಬಾರಕ್, ಮಾಜಿ ಜಿ.ಪಂ ಅಧ್ಯಕ್ಷ ಪಿ.ಆರ್ ಶಿವಕುಮಾರ್ ಶಿವಪುರ, ಮಾಜಿ ಜಿ.ಪಂ ಸದಸ್ಯ ಎಂ.ಜಿ ಲೋಹಿತ್ ಕುಮಾರ್, ಮಾಜಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಧುಪಾಲೇ ಗೌಡ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಹೇಮಂತ್ ಗೌಡ, ಲೋಕೇಶ್, ಕಾಂಗ್ರೆಸ್ ಯುವ ಮುಖಂಡರಾದ ಹರೀಶ್ ಯಾದವ್, ತಿಮ್ಮಣ್ಣ, ಗಜೇಂದ್ರ, ಬಸವರಾಜ್, ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಡ್ಮಿನ್ ಹಾಗೂ ಪ್ರಧಾನ ಕಾರ್ಯದರ್ಶಿ ಆಕಾಶ್ ಎಸ್. ಕಡೆಮನೆ, ಜಿಲ್ಲಾ ಮತ್ತು ತಾಲೂಕಿನ ಯುವ ಕಾಂಗ್ರೆಸ್ ಪದಾಧಿಕಾರಿಗಳು, ಮಹಿಳಾ ಕಾರ್ಯಕರ್ತರು ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Share. Facebook Twitter Pinterest LinkedIn Tumblr Email
Previous Articleಮನೆ ಆವರಣದಲ್ಲಿದ್ದ ಗ್ಯಾಸ್ ಸಿಲಿಂಡರ್ ಕಳ್ಳತನ: ಸಿಸಿಟಿವಿಯಲ್ಲಿ ಸೆರೆ
Next Article Next Post
Kumar
  • Website

Related Posts

Revisión de Mis-consoladores: mejores casinos online en España

July 7, 2026

Hexa Bet Casino im Test: Schwerpunkt auf Zahlungen

July 6, 2026

Boho Casino Test: Spiele, Boni & Auszahlungen

July 5, 2026
Leave A Reply Cancel Reply

Search
Tags
Amazing gadgets Apartment guides Biggest fashion angel Brave Business Business insurances Business schools casino 770 Cheapest flights click here culture Culture tips Electronic devices Fashion Feature featured fitness Flight scanners Food Good stock quotes Hotel deals Interview questions Kingmaker Casino leisure Lifestyle Link Makeup artists Music Open source software Rock fame Sports Staff Pick Stockcharts Studio apartments Tech Tech reviews Topic Tower Rush Travel packages Trending Trip activities VoltageBet bonus review VoltageBet crypto deposits VoltageBet deposit bonus VoltageBet PayPal casino

Corporate clients and leisure travelers has been relying on Groundlink for dependable safe, and professional chauffeured car end service in major cities across World.

  • Facebook
  • Twitter
  • Instagram
  • Pinterest
Don't Miss

Revisión de Mis-consoladores: mejores casinos online en España

Hexa Bet Casino im Test: Schwerpunkt auf Zahlungen

Boho Casino Test: Spiele, Boni & Auszahlungen

Ivibet Casino im Test: Spiele, Boni & Auszahlungen

ಚಿತ್ರದುರ್ಗ ಹೊಯ್ಸಳ ನ್ಯೂಸ್ – ಚಿತ್ರದುರ್ಗ ಜಿಲ್ಲೆಯ ತಾಜಾ ಸುದ್ದಿಗಳು, ರಾಜಕೀಯ, ಸಮಾಜ, ಸಂಸ್ಕೃತಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ಬೆಳವಣಿಗೆಗಳನ್ನು ತಲುಪಿಸುವ ವಿಶ್ವಾಸಾರ್ಹ ಕನ್ನಡ ಸುದ್ದಿ ಜಾಲತಾಣ.

Popular Posts

Revisión de Mis-consoladores: mejores casinos online en España

July 7, 2026

Hexa Bet Casino im Test: Schwerpunkt auf Zahlungen

July 6, 2026

Boho Casino Test: Spiele, Boni & Auszahlungen

July 5, 2026
Copyright © 2026 CHITRADURGA HOYSALA. Designed by WEBBRAHMA.
  • About
  • Contact
  • Advertise
  • Terms
  • FAQ
  • Policy

Type above and press Enter to search. Press Esc to cancel.