ಖಾಸಗಿ ಶಾಲೆಗಳ ಶುಲ್ಕ ಪಟ್ಟಿ ಬಹಿರಂಗಕ್ಕೆ ಕರವೇ ಆಗ್ರಹ
ಚಿತ್ರದುರ್ಗ ಹೊಯ್ಸಳ
ಚಳ್ಳಕೆರೆ:
ತಾಲೂಕಿನಲ್ಲಿ ಖಾಸಗಿ ಶಾಲೆಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದ್ದು, ಪೋಷಕರಿಗೆ ಪಾರದರ್ಶಕ ಮಾಹಿತಿ ನೀಡುವ ಉದ್ದೇಶದಿಂದ ಶಾಲಾ ಶುಲ್ಕವನ್ನು ನೋಟಿಸ್ ಬೋರ್ಡ್‌ನಲ್ಲಿ ಪ್ರಕಟಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಣ) ಒತ್ತಾಯಿಸಿದೆ.
ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಕರವೇ ತಾಲೂಕು ಘಟಕದ ಪದಾಧಿಕಾರಿಗಳು, ಎಲ್‌ಕೆಜಿ, ಯುಕೆಜಿ ಇಂದ 1ರಿಂದ 10ನೇ ತರಗತಿವರೆಗಿನ ಎಲ್ಲಾ ಶುಲ್ಕ ವಿವರಗಳನ್ನು ಶಾಲೆಗಳ ನಾಮಫಲಕ ಹಾಗೂ ನೋಟಿಸ್ ಬೋರ್ಡ್‌ನಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಆಗ್ರಹಿಸಿದ್ದಾರೆ.
ಪ್ರಸ್ತುತ ಅನೇಕ ಖಾಸಗಿ ಶಾಲೆಗಳು ಶುಲ್ಕ ವಿವರಗಳನ್ನು ಸಾರ್ವಜನಿಕವಾಗಿ ಪ್ರಕಟಿಸದೇ ಇರುವುದರಿಂದ ಪೋಷಕರಿಗೆ ಗೊಂದಲ ಉಂಟಾಗುತ್ತಿದೆ. ಆದ್ದರಿಂದ ಶಿಕ್ಷಣ ಇಲಾಖೆ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಎಲ್ಲಾ ಶಾಲೆಗಳಿಗೆ ಸೂಚನೆ ನೀಡಬೇಕು ಇಲ್ಲವಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘಟನೆ ಎಚ್ಚರಿಕೆ ನೀಡಿದೆ.
ಮನವಿ ಸಲ್ಲಿಸುವ ವೇಳೆ ತಾಲೂಕು ಅಧ್ಯಕ್ಷ ಪಿ. ಮಂಜುನಾಥ್, ಗೌರವ ಅಧ್ಯಕ್ಷ ಸಿ. ಬೋಜರಾಜ್, ಪ್ರಧಾನ ಕಾರ್ಯದರ್ಶಿ ಪಿ. ಗಿರೀಶ್, ಯುವ ಘಟಕದ ಅಧ್ಯಕ್ಷ ಮೋದಿನ್, ಕಾರ್ಮಿಕ ಘಟಕದ ಅಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ಶೇಖರ್ ಸೇರಿದಂತೆ ತಿಪ್ಪೇಸ್ವಾಮಿ, ದಾದು ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
