April 30, 2024

Chitradurga hoysala

Kannada news portal

ಸಂವಿಧಾನದ ಅಂಗವಾಗಿ ಅಂಬೇಡ್ಕರ್ ಓದು ಕಾರ್ಯಕ್ರಮ ಅಂಬೇಡ್ಕರ್ ಚಿಂತನೆಗಳು ನೆಲದ ಕಾನೂನು, ಪ್ರಜೆಗಳಿಗೆ ಪೂರಕ

1 min read



ಸಂವಿಧಾನದ ಅಂಗವಾಗಿ ಅಂಬೇಡ್ಕರ್ ಓದು ಕಾರ್ಯಕ್ರಮ

ಅಂಬೇಡ್ಕರ್ ಚಿಂತನೆಗಳು ನೆಲದ ಕಾನೂನು, ಪ್ರಜೆಗಳಿಗೆ ಪೂರಕ

ಚಿತ್ರದುರ್ಗ, ನವೆಂಬರ್26:
ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಚಿಂತನೆಗಳು ನೆಲದ ಕಾನೂನು ಹಾಗೂ ಪ್ರಜೆಗಳಿಗೆ ಪೂರಕವಾಗಿವೆ ಎಂದು ದಾವಣಗೆರೆ ವಿಶ್ವವಿದ್ಯಾನಿಲಯ ಜಿ.ಆರ್.ಹಳ್ಳಿ ಜ್ಞಾನಗಂಗೋತ್ರಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಹೆಚ್.ವಿಶ್ವನಾಥ್ ಹೇಳಿದರು.
ಚಿತ್ರದುರ್ಗ ತಾಲ್ಲೂಕಿನ ಗುಡ್ಡದರಂಗವ್ವನಹಳ್ಳಿಯಲ್ಲಿ ಜ್ಞಾನ ಗಂಗೋತ್ರಿ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ದಾವಣಗೆರೆ ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಸಂವಿಧಾನ ದಿನದ ಅಂಗವಾಗಿ ಡಾ.ಬಿ.ಆರ್.ಅಂಬೇಡ್ಕರ್‍ರವರ ಭಾವಚಿತ್ರ ಹಾಗೂ ಸಂವಿಧಾನದ ಪೀಠಿಕೆಗೆ ಪುಷ್ಪನಮನ ಸಲ್ಲಿಸಿ ಡಾ; ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರು ವಿವಿಧ ರಾಷ್ಟ್ರಗಳ ಸಂವಿಧಾನವನ್ನು ಅಭ್ಯಾಸ ಮಾಡಿ ಭಾರತ ದೇಶಕ್ಕೆ ಬಲಿಷ್ಟವಾದ ಸಂವಿಧಾನವನ್ನು ನೀಡಿದ್ದಾರೆ. ಡಾ; ಬಿ.ಆರ್.ಅಂಬೇಡ್ಕರ್ ರವರ 75ನೇ ಜನ್ಮದಿನವನ್ನು ಸಂವಿಧಾನ ದಿನವನ್ನಾಗಿ ಆಚರಣೆ ಮಾಡುವಂತೆ ಘೋಷಣೆ ಮಾಡಲಾಯಿತು ಎಂದು ಹೇಳಿದರು.
ಭಾರತ ಸಂವಿಧಾನ ಜನರನ್ನು ಸಶಕ್ತಗೊಳಿಸಿದೆ. ಸರ್ವರಿಗೂ ಸಮಾನತೆ ಒದಗಿಸಿದೆ. ಮೂಲಭೂತ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿದೆ. ನಮ್ಮ ಸಂವಿಧಾನ ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು. ಜನರ ಹಿತ, ಸಮಾಜವಾದಿ ಚಿಂತನೆಯ ನೆಲೆಗಟ್ಟಿನಲ್ಲಿ ಭಾರತ ಸಂವಿಧಾನ ಭದ್ರ ಬುನಾದಿಯನ್ನು ಪಡೆದಿದ್ದು, ಜಾತ್ಯಾತೀತವಾದ ನಿಲುವು ಇಟ್ಟುಕೊಂಡು, ಎಲ್ಲ ವರ್ಗಗಳಿಗೂ ಸಾಮಾಜಿಕ ನ್ಯಾಯ ಹಂಚುವ ಸಲುವಾಗಿ ಸಮಾಜದಲ್ಲಿ ಬದುಕುವವರೆಲ್ಲರಿಗೂ ಸಮಾನತೆ ಸಿಗಬೇಕು ಎಂಬುವುದೇ ಸಂವಿಧಾನದ ಮುಖ್ಯ ಆಶಯವಾಗಿದೆ ಎಂದು ಹೇಳಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಧನಂಜಯ ಮಾತನಾಡಿ, ಅಂಬೇಡ್ಕರ್ ಓದು ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಈಗಾಗಲೇ ಪದವಿಪೂರ್ವ, ಪದವಿ ಕಾಲೇಜು, ಸ್ನಾತಕೋತ್ತರ ಕಾಲೇಜು, ಶಿಕ್ಷಕರ ಶಿಕ್ಷಣ ಮಹಾವಿದ್ಯಾಯದ ಪ್ರಶಿಕ್ಷಣಾರ್ಥಿಗಳು ಸೇರಿದಂತೆ ವಿವಿಧ ಅಂಬೇಡ್ಕರ್ ಓದು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಅಂಬೇಡ್ಕರ್ ಓದು ವಿದ್ಯಾರ್ಥಿಗಳಲ್ಲಿ ಅಧ್ಯಯನಶೀಲರನ್ನಾಗಿ ಮಾಡಲು ಸಹಕಾರಿಯಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕೌಶಲ್ಯಕ್ಕೆ ಆದ್ಯತೆ ನೀಡಬೇಕು. ಇದರಿಂದ ಹೆಚ್ಚಿನ ಉದ್ಯೋಗಾವಕಾಶಗಳು ಲಭಿಸಲಿವೆ ಎಂದು ಅಭಿಪ್ರಾಯಪಟ್ಟರು.
ಅಂಬೇಡ್ಕರ್ ಓದು ಕಾರ್ಯಕ್ರಮದ ಅಂಗವಾಗಿ ಭಾರತ ಸಂವಿಧಾನ ಕುರಿತು ಹಮ್ಮಿಕೊಂಡಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.
ಸಂವಿಧಾನ ದಿನದ ಅಂಗವಾಗಿ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಹಾಗೂ ಇದೇ ಸಂದರ್ಭದಲ್ಲಿ ಸಂವಿಧಾನದ ಆಶಯ ಹಾಗೂ ಮೂಲಭೂತ ಹಕ್ಕು, ಕರ್ತವ್ಯಗಳ ಕುರಿತಂತೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಾಯಿತು.
ಕನ್ನಡ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿನಿ ತನುಜ ಕೆ ಪ್ರಥಮ ಸ್ಥಾನ, ವಾಣಿಜ್ಯ ವಿಭಾಗದ ಬಿ.ಎಂ.ರಂಜಿತಾ ದ್ವಿತೀಯ ಸ್ಥಾನ, ಎ.ಅರ್ಚನಾ ತೃತಿಯ ಸ್ಥಾನ ಪಡೆದರು. ಅರ್ಥಶಾಸ್ತ್ರ ವಿಭಾಗದ ಸಿ.ಎಸ್.ಪ್ರಿಯಾಂಕ, ರಾಸಾಯನಶಾಸ್ತ್ರ ವಿಭಾಗದ ಐಶ್ವರ್ಯ ಹಾಗೂ ಕನ್ನಡ ವಿಭಾಗದ ಇ.ಸುರೇಶ ಅವರು ಸಾಮಾಧಾನಕರ ಬಹುಮಾನ ಪಡೆದರು.
ಕಾರ್ಯಕ್ರಮದಲ್ಲಿ ಗುಡ್ಡದರಂಗವ್ವನಹಳ್ಳಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ರಾಸಾಯನಶಾಸ್ತ್ರವಿಭಾಗದ ಮುಖ್ಯಸ್ಥ ಡಾ.ನಂದೀಶ್ವರಪ್ಪ, ಸಸ್ಯಶಾಸ್ತ್ರವಿಭಾಗದ ಕೋಟ್ರೇಶ್, ಎನ್‍ಎಸ್‍ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಡಿ.ಎಚ್.ಗಿರೀಶ್ ಇದ್ದರು. ಡಾ.ಹೆಚ್.ಜಿ.ವಿಜಯಕುಮಾರ್ ನಿರೂಪಿಸಿದರು. ಡಿ.ಶಶಿಧರ ವಂದಿಸಿದರು.

About The Author

Leave a Reply

Your email address will not be published. Required fields are marked *