April 30, 2024

Chitradurga hoysala

Kannada news portal

ಉಚಿತ ವಾಲಿಬಾಲ್ ತರಬೇತಿ ಶಿಬಿರ : ಮಹಮ್ಮದ್ ಮುಹೀಬುಲ್ಲಾ

1 min read




ಉಚಿತ ವಾಲಿಬಾಲ್ ತರಬೇತಿ ಶಿಬಿರ

ಚಿತ್ರದುರ್ಗ ಹೊಯ್ಸಳ ನ್ಯೂಸ್/

ಚಿತ್ರದುರ್ಗ:

ಬೇಸಿಗೆ ರಜೆಯ ಪ್ರಯುಕ್ತ ಚಿತ್ರದುರ್ಗ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ವಾಲಿಬಾಲ್ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಉಚಿತ ವಾಲಿಬಾಲ್ ಬೇಸಿಗೆ ತರಬೇತಿ ಶಿಬಿರವನ್ನು ಏಪ್ರಿಲ್ 5 ರಿಂದ ಏಪ್ರಿಲ್ 25ರವರೆಗೆ ಬೆಳಗ್ಗೆ 6.30 ರಿಂದ 8.30 ರವರೆಗೆ ಮತ್ತು ಸಂಜೆ 4.30 ರಿಂದ 7 ರವರೆಗೆ ಜಿಲ್ಲಾ ಕ್ರೀಡಾಂಗಣದ ವಾಲಿಬಾಲ್ ಅಂಕಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಚಿತ್ರದುರ್ಗದ ಅಗಸನಕಲ್ಲು ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಏಪ್ರಿಲ್ 10 ರಿಂದ ಏಪ್ರಿಲ್ 20ರವರೆಗೆ ಬೆಳಗ್ಗೆ 6.30 ರಿಂದ 8.30 ರವರೆಗೆ ಮತ್ತು ಸಂಜೆ 4.30 ರಿಂದ 6.30 ರವರೆಗೆ ಉಚಿತ ವಾಲಿಬಾಲ್ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ವಾಲಿಬಾಲ್ ತರಬೇತುದಾರ ಮಹಮ್ಮದ್ ಮುಹೀಬುಲ್ಲಾ ಅವರ ಮೊಬೈಲ್ ಸಂಖ್ಯೆ 9611673475 ಮತ್ತು ದೈಹಿಕ ಶಿಕ್ಷಕರು ಹಾಗೂ ವಾಲಿಬಾಲ್ ತರಬೇತುದಾರ ಫಯಾಜ್ ಅವರ ಮೊಬೈಲ್ ಸಂಖ್ಯೆ 9482600078ಕ್ಕೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *