27-05-2022 ರಂದು ನೇರ್ಲಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ
1 min read27-05-2022 ರಂದು ನೇರ್ಲಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ
ಚಿತ್ರದುರ್ಗಹೊಯ್ಸಳ ನ್ಯೊಸ್ /
ಚಿತ್ರದುರ್ಗ:
ಮೇ.27 ಶುಕ್ರವಾರದಂದು ಮೊಳಕಾಲ್ಮೂರು ತಾಲೂಕು ನೇರ್ಲಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ.
ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎನ್ನುವ ಘೋಷವಾಕ್ಯದೊಂದಿಗೆ ಜರುಗುವ ಗ್ರಾಮವಾಸ್ತವ್ಯದಲ್ಲಿ ಗ್ರಾಮದ ಬಹುದಿನಗಳ ಸಮಸ್ಯೆಗಳಿಗೆ ಜಿಲ್ಲಾಧಿಕಾರಿಗಳು ಸ್ಥಳದಲ್ಲಿಯೇ ಪರಿಹಾರ ದೊರಕಿಸಿ ಕೊಡಲಿದ್ದಾರೆ.
ಅಂದು ಬೆಳಿಗ್ಗೆ 10:30 ರಿಂದ ಗ್ರಾಮದಲ್ಲಿ ಇರುವ ಜಿಲ್ಲಾಧಿಕಾರಿಗಳಿಗೆ ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.