May 18, 2024

Chitradurga hoysala

Kannada news portal

ಮತ್ತೊಂದು ಕ್ರಾಂತಿ ಅನಿವಾರ್ಯ : ನನ್ನ ಕಾಳಜಿಗಳಲ್ಲಿ ರಾಜಿ ಆಗುವ ಪ್ರಶ್ನೆಯೇ ಇಲ್ಲ : ಸಿದ್ದರಾಮಯ್ಯ

1 min read


ಬಿ.ಆರ್.ಪಾಟೀಲ್ ಅವರು ಮಂತ್ರಿ ಆಗಬೇಕಿತ್ತು. ಆದರೆ ಹಲವಾರು ಕಾರಣಗಳಿಂದ ಆಗಲಿಲ್ಲ. ಮುಂದೆ ಒಳ್ಳೆ ಭವಿಷ್ಯ ಇದೆ

ಅಸಮಾನತೆ ತೊಲಗದೆ ಪ್ರಜಾಪ್ರಭುತ್ವ ಯಶಸ್ವಿ ಆಗಲು ಸಾಧ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜೆ.ಪಿ.ಪ್ರಶಸ್ತಿಗೆ ಬಿ.ಆರ್.ಪಾಟೀಲ್ ಆಯ್ಕೆ ಅತ್ಯಂತ ಸೂಕ್ತ: ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಮತ್ತೊಂದು ಸಂಪೂರ್ಣ ಕ್ರಾಂತಿ ಈ ದೇಶದಲ್ಲಿ ನಡೆಯಬೇಕಿದೆ: ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ ಹೊಯ್ಸಳ ನ್ಯೂಸ್/

ಬೆಂಗಳೂರು ಆ 11:

ಪೂರ್ಣಕ್ರಾಂತಿಯ ಜಯಪ್ರಕಾಶ್ ನಾರಾಯಣ್ ಪ್ರಶಸ್ತಿಗೆ ಸಮಾಜವಾದಿ ಹೋರಾಟಗಾರ ಬಿ.ಆರ್.ಪಾಟೀಲ್ ಅವರ ಆಯ್ಕೆ ಅತ್ಯಂತ ಸೂಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ಸೂಚಿಸಿದರು.‌

ಭಾರತ ಯಾತ್ರಾ ಕೇಂದ್ರ ಮತ್ತು ಲೋಕನಾಯಕ ಜೆ.ಪಿ. ವಿಚಾರ ವೇದಿಕೆ ಸಹಯೋಗದಲ್ಲಿ ಚಿತ್ರಕಲಾ ಪರಿಷತ್ ನಲ್ಲಿ ಹಮ್ಮಿಕೊಂಡಿದ್ದ ಜಯಪ್ರಕಾಶ್ ನಾರಾಯಣ್-122 ಕಾರ್ಯಕ್ರಮದಲ್ಲಿ ಜೆ.ಪಿ.ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಬಿ.ಆರ್.ಪಾಟೀಲ್ ಜನಪರ ಕಾಳಜಿ ಮತ್ತು ಸಮಾಜವಾದಿ ಮೌಲ್ಯಗಳಲ್ಲಿ ಯಾವತ್ತೂ ರಾಜಿ ಮಾಡಿಕೊಂಡವರಲ್ಲ. ತುರ್ತು ಪರಿಸ್ಥಿಯಲ್ಲಿ ಆರು ತಿಂಗಳು ಜೈಲುವಾಸ ಅನುಭವಿಸಿದ್ದಾರೆ. ಈಗಲೂ ಅದೇ ಕಾಳಜಿಗಳನ್ನು ಇಟ್ಟುಕೊಂಡಿದ್ದಾರೆ ಎಂದರು.

ಜಾತಿ ಮತ್ತು ಆರ್ಥಿಕ ಅಸಮಾನತೆ ತೊಡೆದು ಹಾಕದೆ ಹೋದರೆ ರಾಜಕೀಯ ಸ್ವಾತಂತ್ರ್ಯದ ಸೌಧವನ್ನು ಶೋಷಿತ ಜನರೇ ಧ್ವಂಸ ಮಾಡ್ತಾರೆ ಎನ್ನುವ ಅಂಬೇಡ್ಕರ್ ಅವರ ಎಚ್ಚರಿಕೆಯ ಮಾತುಗಳು ನನ್ನನ್ನು ಸದಾ ಎಚ್ಚರಿಸುತ್ತಿರುತ್ತವೆ ಎಂದರು.

ನಾನು ಪ್ರತಿ ವರ್ಷ ಬಜೆಟ್ ಮಂಡಿಸುವಾಗಲೂ ಪ್ರಣಾಳಿಕೆಯನ್ನು ಅಂಗೈಯಲ್ಲಿ ಇಟ್ಟುಕೊಂಡೇ ಕಾರ್ಯಕ್ರಮ ರೂಪಿಸುತ್ತೇನೆ. ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೂ ಎಲ್ಲಾ ಭರವಸೆ ಈಡೇರಿಸಿದ್ದೇನೆ. ಈ ಬಾರಿ ಚುನಾವಣೆಯಲ್ಲಿ ಕೊಟ್ಟ ಎಲ್ಲಾ ಭರವಸೆಗಳನ್ನು ನಾನು ಈಡೇರಿಸುತ್ತೇನೆ ಎಂದರು.

ಕಳೆದ ಐದು ವರ್ಷಗಳಲ್ಲಿ ಬಿಜೆಪಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿಟ್ಟಿದ್ದಾರೆ. ಹಣ ಒದಗಿಸಲಾಗದಿದ್ದರೂ ಅವೈಜ್ಞಾನಿಕ ಯೋಜನೆಗಳನ್ನು ಘೋಷಿಸಿದ್ದಾರೆ. ಆದರೂ ನಾವು 56 ಸಾವಿರ ಕೋಟಿಗಳನ್ನು ಐದು ಗ್ಯಾರಂಟಿಗಳಿಗೆ ಒದಗಿಸುವುದರ ಜತೆಗೆ ಇತರೆ ಅಭಿವೃದ್ಧಿ ಕಾರ್ಯಕ್ರಮಗಳಿಗೂ ಹಣ ಕೊಡುತ್ತಿದ್ದೇವೆ. ಐದೂ ಗ್ಯಾರಂಟಿಗಳೂ ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸಲ್ಲುತ್ತಿದೆ ಎಂದು ವಿವರಿಸಿದರು.

ಸರ್ವರ ಸರ್ವೋದಯದ ಕಾರಣಕ್ಕೆ ಐದು ಗ್ಯಾರಂಟಿಗಳನ್ನು ಸರ್ವ ಜಾತಿ-ಧರ್ಮದವರಿಗಾಗಿ ಜಾರಿ ಮಾಡಿದ್ದೇವೆ. ಈ ಗ್ಯಾರಂಟಿಗಳಿಂದ ಜನರ ಕೊಳ್ಳುವ ಶಕ್ತಿ ಹೆಚ್ಚುತ್ತದೆ. ಆರ್ಥಿಕತೆಗೆ ಚೈತನ್ಯ ಬಂದಿದೆ. ರಾಜ್ಯದ ಜಿಡಿಪಿ ಬೆಳವಣಿಗೆಯಾಗಿದೆ ಎಂದರು.

ಚಿತ್ರಕಲಾ ಪರಿಷತ್ ಅಧ್ಯಕ್ಷರಾದ ಡಾ.ಬಿ.ಎಲ್.ಶಂಕರ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಮಾಜವಾದಿ ಚಿಂತಕ ನಟರಾಜ್ ಹುಳಿಯಾರ್, ಕಿರುತೆರೆ ನಿರ್ದೇಶಕ ಟಿ.ಎನ್.ಸೀತಾರಾಮ್, ಮಾಜಿ ವಿಧಾನ ಪರಿಷತ್ ಸದಸ್ಯರಾದ‌ ಡಾ.ಎಂ.ಪಿ.ನಾಡಗೌಡ, ಮೋಹನ ಕೊಂಡಜ್ಜಿ ಮತ್ತು ಕನ್ನಡ ಪುಸ್ತಕ ಪ್ರಾಧಿಕಾರದ ಡಾ.ವಸುಂಧರಾ ಭೂಪತಿ ಉಪಸ್ಥಿತರಿದ್ದರು.

ಬಿ.ಆರ್.ಪಾಟೀಲ್ ನನ್ನನ್ನು ಕರೆಯುವುದೇ, “ಏನೋ ಗೆಳೆಯ” ಅಂತ. ನಾವಿಬ್ಬರೂ ಸಮಾಜವಾದಿಗಳು ಒಟ್ಟಿಗೇ ವಿಧಾನಸೌಧ ಪ್ರವೇಶಿಸಿದರು. ಆದರೆ ನಾನು ಬಿ.ಆರ್.ಪಾಟೀಲ್ ರಷ್ಟು ಹೋರಾಟ ಮಾಡಿಲ್ಲ. ಹೋರಾಟ ಮಾಡಿ ಜೈಲಿಗೆ ಹೋಗಲಿಲ್ಲ

ನಾನು ಈಗಲೂ 2013 ರ ಸಿದ್ದರಾಮಯ್ಯನೇ. ನನ್ನ ಕಾಳಜಿಗಳಲ್ಲಿ ರಾಜಿ ಆಗುವ ಪ್ರಶ್ನೆಯೇ ಇಲ್ಲ

ಮತ್ತೊಂದು ಕ್ರಾಂತಿ ಅನಿವಾರ್ಯ

ಈಗ ನಮ್ಮ ದೇಶದಲ್ಲಿ ಮತ್ತೊಂದು ಸಂಪೂರ್ಣ ಕ್ರಾಂತಿ ನಡೆಯಬೇಕಾದ ಅಗತ್ಯವಿದೆ. ದೇಶದ ಸಮಸ್ಯೆ ಅಷ್ಟು ಹದಗೆಡುತ್ತಿದೆ. ಸಮಾಜವಾದಿ ಹೋರಾಟಗಾರ ಜಯಪ್ರಕಾಶ್ ಅವರು ನಡೆಸಿದ ಸಂಪೂರ್ಣ ಕ್ರಾಂತಿ ಮಾದರಿಯ ಮತ್ತೊಂದು ಕ್ರಾಂತಿಗೆ ದೇಶ ಹದವಾಗಿದೆ ಎಂದರು.

About The Author

Leave a Reply

Your email address will not be published. Required fields are marked *