ಕನಕ ಗುರುಪೀಠದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
1 min readಹೊಸದುರ್ಗ : ಶ್ರೀಮದ್ ಜಗದ್ಗುರು ರೇವಣಸಿದ್ದೇಶ್ವರ ಸಿಂಹಾಸನ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಹೊಸದುರ್ಗ ಶಾಖಾ ಮಠದಿಂದ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲು ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿವರ್ಷ ಜುಲೈ 22ರಂದು ಪ್ರತಿಭಾ ಪುರಸ್ಕಾರವನ್ನು ಆಯೋಜಿಸಿಕೊಂಡು ಬರಲಾಗುತಿತ್ತು. ಕೋವಿಡ್ 19 ಹಿನ್ನೆಲೆಯಲ್ಲಿ ಸೊಂಕು ಸುಧಾರಿಸಿದ ಮೇಲೆ ಕಾರ್ಯಕ್ರಮ ಆಯೋಜಿಸಲಾಗುತ್ತದೆ.
2019-20ನೇಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ 90%ಕ್ಕಿಂತ ಅತಿ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥೀಗಳು ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿಗಳು ಅಂಕ ಪಟ್ಟಿ, ವರ್ಗಾವಣೆ ಪ್ರಮಾಣ ಪತ್ರವನ್ನು (ನಕಲು) ಅಂಚೆ ಮೂಲಕ ಶ್ರೀಮದ್ ಜಗದ್ಗುರು ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾಮಠ ಕನಕಧಾಮ ಹೊಸದುರ್ಗ ತಾಲೂಕು. ಚಿತ್ರದುರ್ಗ ಜಿಲ್ಲೆ 577527. ಹೆಚ್ಚಿನ ಮಾಹಿತಿಗಾಗಿ ಯೋಗೇಶ್ ಸಾವಂತ 9743001066, ಮಹೇಶ್ ಗೌಡ 9480111933 ಸಂಪರ್ಕಿಸಲು ಶ್ರೀಮಠ ಪ್ರಕಟಣೆಯಲ್ಲಿ ತಿಳಿಸಿದೆ.