ಆಗಸ್ಟ್ 17 ಕ್ಕೆ ಸಂಸದ ನಾರಾಯಣಸ್ವಾಮಿ ಅಧ್ಯಕ್ಷತೆಯಲ್ಲಿ ದಿಶಾ ಸಭೆ.
1 min readಚಿತ್ರದುರ್ಗ, ಆ.14:ಕೇಂದ್ರ ಪುರಸ್ಕøತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (DDCMC)ಯ ದಿಶಾ (DISHA) ಸಭೆಯನ್ನು ಆ. 17 ರಂದು ಬೆಳಿಗ್ಗೆ 10.30 ಕ್ಕೆ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಸಂಸದ ಎ.ನಾರಾಯಣಸ್ವಾಮಿ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಟಿ.ಯೋಗೇಶ ತಿಳಿಸಿದ್ದಾರೆ.