ಕಾರ್ಮಿಕರ ಸಚಿವರ ಚಿತ್ರದುರ್ಗ ಜಿಲ್ಲಾ ಪ್ರವಾಸ
1 min read

ಕಾರ್ಮಿಕರ ಸಚಿವರ ಚಿತ್ರದುರ್ಗ ಜಿಲ್ಲಾ ಪ್ರವಾಸ
ಚಿತ್ರದುರ್ಗ ಹೊಯ್ಸಳ ನ್ಯೂಸ್/
ಚಿತ್ರದುರ್ಗ :
ಕಾರ್ಮಿಕ ಸಚಿವರಾದ ಸಂತೋಷ ಎಸ್.ಲಾಡ್ ಅವರು ನವೆಂಬರ್ 3ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ನ.3ರಂದು ಬೆಳಿಗ್ಗೆ 8.30ಕ್ಕೆ ಬೆಂಗಳೂರಿನಿಂದ ಹೊರಟು, 11.30ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿ, ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯ ಶಾಸಕರು, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು.
ಮಧ್ಯಾಹ್ನ 12 ರಿಂದ 1.30ರವರೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕಾರ್ಮಿಕ ಇಲಾಖಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 2.30 ರಿಂದ 4 ರವರೆಗೆ ಮಾಲೀಕ ವರ್ಗದ ಸಂಘಟನೆಗಳ, ಆಡಳಿತ ವರ್ಗದವರ ಸಭೆ ನಡೆಸುವರು.
ಸಂಜೆ 4 ರಿಂದ 5 ರವರೆಗೆ ಪಕ್ಷದ ಕಚೇರಿಗೆ ಭೇಟಿ ನೀಡುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.