ನಿಷೇಧಿತ ಪಟಾಕಿಗಳು ವಶಕ್ಕೆ ಪಡೆದ ಅಧಿಕಾರಿಗಳು
1 min readನಿಷೇಧಿತ ಪಟಾಕಿಗಳು ವಶಕ್ಕೆ ಪಡೆದ ಅಧಿಕಾರಿಗಳು
ಚಿತ್ರದುರ್ಗ ಹೂಯ್ಸಳ ನ್ಯೂಸ್/
ಹೊಸದುರ್ಗ:
ದೀಪಾವಳಿ ಹಬ್ಬದ ನಿಮಿತ್ತ ಹೊಸದುರ್ಗದ ಶ್ರೀ ವೀರಭದ್ರೇಶ್ವರ ದೇವಾಲಯದ ಮುಂಭಾಗದ ಆವರಣದಲ್ಲಿ ಮಳಿಗೆಗಳಲ್ಲಿ ಮಾರಾಟ ಮಾಡಲಾಗುತ್ತಿದ್ದ ನಿಷೇಧಿತ ಪಟಾಕಿಗಳನ್ನು ಅಧಿಕಾರಿಗಳ ತಂಡ ವಶಕ್ಕೆ ಪಡೆದುಕೊಂಡಿದ್ದು, ಕಡ್ಡಾಯವಾಗಿ ಹಸಿರು ಪಟಾಕಿ ಗಳನ್ನು ಮಾತ್ರ ಮಾರಾಟ ಮಾಡಬೇಕೆಂದು ಹೊಸದುರ್ಗ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮಹೇಶ್ ಅವರು ಅವರು ಸೂಚನೆ ನೀಡಿದ್ದಾರೆ.
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಉಳಿದ ಪಟಾಕಿಗಳ ಮಾರಾಟ ಮತ್ತು ಬಳಕೆಗೆ ಸರ್ಕಾರ ನಿಷೇಧಿಸಿದ್ದು, ಪಟಾಕಿ ಮಾರಾಟಗಾರರಿಗೆ ಈ ಬಗ್ಗೆ ಈಗಾಗಲೇ ತಿಳುವಳಿಕೆ ನೀಡಲಾಗಿದೆ.
ಸಬ್ ಇನ್ಸ್ಪೆಕ್ಟರ್ ಮಹೇಶ್ ರವರ ಅವರ ನೇತೃತ್ವದಲ್ಲಿ ವಿವಿಧ ಅಧಿಕಾರಿಗಳ ತಂಡ ಹೊಸದುರ್ಗದ ವೀರಭದ್ರೇಶ್ವರ ಮುಂಭಾಗದ ಆವರಣದಲ್ಲಿ ಪಟಾಕಿ ಮಾರಾಟ ಮಾಡುತ್ತಿದ್ದ ಮಳಿಗೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದು, ನಿಷೇಧಿತ ಪಟಾಕಿ ಮಾರಾಟ ಮಾಡುತ್ತಿದ್ದುದನ್ನು ಗಮನಿಸಿದೆ. ನಿಷೇಧಿತ ಪಟಾಕಿಗಳನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು, ಸೂಕ್ತ ಕ್ರಮ ಕೈಗೊಂಡಿದ್ದಾರೆ.
ದಾಳಿಯ ವೇಳೆ ಆರ್ ಐ ರಾಘವೇಂದ್ರ ಹಾಗೂ ಇತರೆ ಅಧಿಕಾರಿಗಳು ಕೂಡ ಭಾಗವಹಿಸಿದ್ದರು.