ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 28 ಸ್ಥಾನವನ್ನ ಗೆಲ್ಲಲಿದೆ : ರಾಜ್ಯದ್ಯಕ್ಷ ಬಿ.ವೈ. ವಿಜಯೇಂದ್ರ
1 min readಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 28 ಸ್ಥಾನವನ್ನ ಗೆಲ್ಲಲಿದೆ : ರಾಜ್ಯದ್ಯಕ್ಷ ಬಿ.ವೈ. ವಿಜಯೇಂದ್ರ
ಚಿತ್ರದುರ್ಗ ಹೊಯ್ಸಳ ನ್ಯೂಸ್/
ವೆಬ್ ಸಂಪಾದಕ: ಸಿ.ಎನ್.ಕುಮಾರ್,
ಹೊಸದುರ್ಗ:
ತಾಲೂಕಿನಲ್ಲಿರುವ ಭಗೀರಥ ಮಠ, ಸಾಣೆಹಳ್ಳಿ ಮಠ.ಕುಂಚಿಟಿಗ ಮಠ. ಕನಕ ಮಠಕ್ಕೆ ಗುರುವಾರ ರಾಜ್ಯ ಬಿಜೆಪಿ ನೂತನ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ಪರಮಪೂಜ್ಯ ಶ್ರೀಗಳಿಂದ ಆಶೀರ್ವಾದವನ್ನು ಪಡೆದಿದ್ದಾರೆ.
ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಿ.ವೈ.ವಿಜಯೇಂದ್ರ ಅವರು ತಮ್ಮ ಮೊದಲ ಜಿಲ್ಲಾ ಪ್ರವಾಸವನ್ನು ಕೋಟೆನಾಡು ಚಿತ್ರದುರ್ಗದಿಂದ ಆರಂಭಿಸುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ. ಸಾಮಾನ್ಯವಾಗಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ತಮ್ಮ ಸ್ವಕ್ಷೇತ್ರಕ್ಕೆ ಹೋಗುವುದು ಸರ್ವೇಸಾಮಾನ್ಯ ಆದರೆ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಯಂಗ್ ಸ್ಟಾರ್ ಬಿ.ವೈ.ವಿಜಯೇಂದ್ರ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದಿದ್ದಾರೆ.
ಹಾಗೆಯೇ ಇಂದು ಜಿಲ್ಲೆಯ ಎಲ್ಲ ಮಠಕ್ಕೆ ಭೇಟಿ ನೀಡಿದ್ದು ಇದೆ ವೇಳೆ ಕುಂಚಿಟಿಗ ಮಠಕ್ಕೆ ಭೇಟಿ ನೀಡಿ ಶ್ರೀ ಶಾಂತವೀರ ಸ್ವಾಮೀಜಿಗಳ ಆಶೀರ್ವಾದ ಪಡೆದರು.ಈ ವೇಳೆ ಕುಂಚಿಟಿಗ ಮಠದ ವತಿಯಿಂದ, ಹೊಸದುರ್ಗ ತಾಲೂಕು ಬಿಜೆಪಿ ಘಟಕದಿಂದ ಮತ್ತು ಬಿ ವೈ ವಿಜಯೇಂದ್ರ ಅವರ ಅಭಿಮಾನಿ ಬಳಗದಿಂದ ಜೊತೆಗೆ ಲಿಂಗಾಯಿತ ಸಮುದಾಯದಿಂದ ಗೌರವವನ್ನು ಸ್ವೀಕರಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಬಿ.ವೈ. ವಿಜಯೇಂದ್ರ ಮಾತನಾಡಿ, ರಾಜ್ಯದ 28 ಲೋಕಸಭಾ ಸ್ಥಾನಗಳನ್ನು ಬಿಜೆಪಿ ಗೆಲ್ಲುವ ಮೂಲಕ ಹೊಸ ಇತಿಹಾಸ ಸೃಷ್ಠಿಸಬೇಕು ಎನ್ನುವುದು ನಮ್ಮ ಗುರಿ. ಒಂದು ದಿನವೂ ಮನೆಯಲ್ಲಿರದೆ,ರಾಜ್ಯ ಪ್ರವಾಸ ಮಾಡುತ್ತೇನೆ. ಲೋಕಸಭೆ ಜೊತೆಗೆ ಜಿಲ್ಲಾ ಪಂಚಾಯಿತಿ,ತಾಲ್ಲೂಕು ಪಂಚಾಯಿತಿ ಚುನಾವಣೆಗೂ ಮಹತ್ವ ಕೊಟ್ಟು ಕಾರ್ಯಕರ್ತರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ’ಎಂದರು.
ಈ ವೇಳೆ ವಿಧಾನ ಪರಿಷತ್ ಸದಸ್ಯ ಕೆ.ಏಸ್.ನವೀನ್, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎ.ಮುರುಳಿ ಮತ್ತು ರಾಜ್ಯ ಖನಿಜ ನಿಗಮದ ಮಾಜಿ ಅಧ್ಯಕ್ಷ ಎಸ್.ಲಿಂಗಮೂರ್ತಿ ಸೇರಿದಂತೆ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿದ್ದರು ಸಮುದಾಯದ ಮುಖಂಡರು ಹಾಜರಿದ್ದರು.
ಬಿಜೆಪಿ ಸರ್ಕಾರ ಇದ್ದಾಗ ಶೇ40 ಭ್ರಷ್ಟಾಚಾರ ಎಂದು ಕಾಂಗ್ರೆಸ್ ದಿನವೂ ಆರೋಪ ಮಾಡುತ್ತಿತ್ತು. ಆದರೆ,ಈಗಿನ ಕಾಂಗ್ರೆಸ್ ಸರ್ಕಾರ ಮೊದಲ ದಿನದಿಂದಲೇ ವರ್ಗಾವಣೆ ದಂಧೆ ಮಾಡುತ್ತಿದೆ. ಐಟಿ ದಾಳಿಯಲ್ಲಿ ಕೋಟ್ಯಾಂತರ ಹಣ ಸಿಕ್ಕಿದಾಗ ಕಾಂಗ್ರೆಸ್‌ನವರು ಸ್ವಾಗತ ಮಾಡಲಿಲ್ಲ, ಅವರಿಗೆ ನೋವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು 6 ತಿಂಗಳಾಗಿದೆ. ಒಂದು ಹೊಸ ಯೋಜನೆ ಜಾರಿಗೆ ಬಂದಿಲ್ಲ. ಅರೆಬರೆ ಬೆಂದಿರುವ ಗ್ಯಾರಂಟಿಗಳನ್ನು ನೀಡಿ ಜನರಿಗೆ ವಂಚಿಸುತ್ತಿದ್ದಾರೆ. ರಾಜ್ಯದಲ್ಲಿ ಹಗಲು ದರೋಡೆ ನಡೆಯುತ್ತಿದೆ.
ಬಿ.ವೈ.ವಿಜಯೇಂದ್ರ
ಅಧ್ಯಕ್ಷರು, ರಾಜ್ಯ ಬಿಜೆಪಿ, ಕರ್ನಾಟಕ.