ರೈತ ಸಂಘದ ನುಲೇನೂರು ಶಂಕರಪ್ಪ ನಿಧನ
1 min read
ರೈತ ಸಂಘದ ನುಲೇನೂರು ಶಂಕರಪ್ಪ ನಿಧನ
ಚಿತ್ರದುರ್ಗ ಹೊಯ್ದಳ ನ್ಯೂಸ್/
ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲಾನೀರಾವರಿ ಅನುಷ್ಠಾನ ಹೋರಾಟ ಸಮಿತಿ ಅಧ್ಯಕ್ಷ ಹಾಗೂ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ನುಲೇನೂರು ಎಂ.ಶಂಕರಪ್ಪ (68).ಮಂಗಳವಾರ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ರಿವೈದ್ಯ ಡಾ.ರವಿಶಂಕರ್ ಸೇರಿದಂತೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರ ಅಗಲಿದ್ದಾರೆ. ಅಂತ್ಯಕ್ರಿಯೆ ಹುಟ್ಡೂರು ಹೊಳಲ್ಕೆರೆ ತಾಲೂಕಿನ ಟಿ.ನುಲೇನೂರು ಗ್ರಾಮದಲ್ಲಿ ಬುಧವಾರ ಸಂಜೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಬುಧವಾರ ಬೆಳಿಗ್ಗೆ 10.30 ಕ್ಕೆ ಚಿತ್ರದುರ್ಗ ಜಿಲ್ಲಾಧಿಕಾರಿ ವೃತ್ತದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.