ಆರ್.ಕೆ.ನಾಯ್ಡು ನಿಧನ : ಮಾಜಿ ಸಚಿವ ಎಚ್.ಆಂಜನೇಯ ಸಂತಾಪ
1 min readಆರ್.ಕೆ.ನಾಯ್ಡು ನಿಧನ :
ಮಾಜಿ ಸಚಿವ ಎಚ್.ಆಂಜನೇಯ ಸಂತಾಪ
ಚಿತ್ರದುರ್ಗ ಹೊಯ್ಸಳ ನ್ಯೂಸ್/
ಚಿತ್ರದುರ್ಗ:
ಜಿಲ್ಲಾ ಕಾಂಗ್ರೆಸ್ ಪಕ್ಷದ ಹಿರಿಯ ಉಪಾಧ್ಯಕ್ಷ ಆರ್.ಕೆ.ನಾಯ್ಡು (82) ಶುಕ್ರವಾರ ನಿಧನ ಹೊಂದಿದರು.
ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬಸವೇಶ್ವರ ಆಸ್ಪತ್ರೆಗೆ ದಾಖಲಾಗಿದ್ದರು. ಒಬ್ಬ ಪುತ್ರ, ನಾಲ್ವರು ಪುತ್ರಿಯರು ಇದ್ದಾರೆ. ಜೋಗಿಮಟ್ಡಿ ರಸ್ತೆಯ ರುದ್ರಭೂಮಿಯಲ್ಲಿ ಶನಿವಾರ ಬೆಳಗ್ಗೆ 11 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
ಅಂತಿಮ ದರ್ಶನ:
ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಮಾಜಿ ಸಚಿವ ಎಚ್.ಆಂಜನೇಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮುಖಂಡ ಜಿ.ಎಸ್.ಮಂಜುನಾಥ್ ಸೇರಿದಂತೆ ಅನೇಕ ಗಣ್ಯರು ಗುಮಾಸ್ತರ ಕಾಲೋನಿಯಲ್ಲಿನ ಅವರ ನಿವಾಸಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಸಂತಾಪ:
ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಮುತ್ಸದ್ದಿ ಆರ್.ಕೆ.ನಾಯ್ಡು ನಿಧನ ಅತೀವ ದುಃಖವನ್ನು ಉಂಟು ಮಾಡಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಸಂತಾಪ ವ್ಯಕ್ತಪಡಿಸಿದ್ದಾರೆ. ಪಕ್ಷದ ಕಟ್ಟಾಳು ಆಗಿದ್ದ ನಾಯ್ಡು ಅವರು ಜಿಲ್ಲಾ ಕಾಂಗ್ರೆಸ್ ಸಮಿತಿಯಲ್ಲಿ ಧೀರ್ಘ ಕಾಲ ವಿವಿಧ ಹುದ್ದೆಗಳನ್ನು ಅಲಂಕರಿಸಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು.
ಇಳಿ ವಯಸ್ಸಿನಲ್ಲೂ ಪಕ್ಷದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸಲಹೆ-ಸೂಚನೆ ನೀಡುತ್ತಿದ್ದ ಅವರಲ್ಲಿನ ಪಕ್ಷದ ಬದ್ಧತೆ ಯುವ ಪೀಳಿಗೆಗೆ ಮಾದರಿ ಆಗಿತ್ರು.ಇಂತಹ ಹಿರಿಯ ನಾಯಕನ ಅಗಲಿಕೆ ಬಹಳ ದುಃಖವನ್ನು ತಂದಿದೆ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಪಕ್ಷದ ಕಾರ್ಯಕರ್ತರು ಹಾಗೂ ಕುಟುಂಬದ ಸದಸ್ಯರಿಗೆ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೆನೆ ಎಂದು ತಿಳಿಸಿದ್ದಾರೆ.