ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಹಾಗೂ ಸೀಟ್ ಬೆಲ್ಟ್ ಧರಿಸಬೇಕು ಡಿವೈಎಸ್ಪಿ ರಾಜಣ್ಣ
1 min read
ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಹಾಗೂ ಸೀಟ್ ಬೆಲ್ಟ್ ಧರಿಸಬೇಕು: ಡಿವೈಎಸ್ಪಿ ರಾಜಣ್ಣ
ಚಿತ್ರದುರ್ಗ ಹೊಯ್ಸಳ
ಚಳ್ಳಕೆರೆ :
ನಗರದಲ್ಲಿ ಪೊಲೀಸ್ ಇಲಾಖೆಯಿಂದ ಆಯೋಜಿಸಿದ ವಾಹನ ಸವಾರರಿಗೆ ಜಾಗೃತಿ ಜಾಥಕೆ ಚಾಲನೆ ನೀಡಿ ಮಾತನಾಡಿದ ಡಿವೈಎಸ್ಪಿ ರಾಜಣ್ಣ ಗ್ರಾಮೀಣ ಭಾಗದಿಂದ ಪ್ರತಿದಿನ ಬರುವ ವಾಹನ ಸವಾರರು ಹೆಲ್ಮೆಟ್ ಹಾಗೂ ಸೀಟ್ ಬೆಲ್ಟ್ ಕಡ್ಡಾಯವಾಗಿ ಧರಿಸಿ ಚಾಲನೆ ಮಾಡಿ ತಮ್ಮ ಜೀವನ ರಕ್ಷಿಸಿಕೊಳ್ಳಿ ಎಂದು ಸಾರ್ವಜನಿಕರಿಗೆ ತಿಳಿಸಿದರು.
ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹೆಲ್ಮೆಟ್ ಧರಿಸಿ ಜಾಥ ಮಾಡುವುದರ ಮೂಲಕ ಸಾರ್ವಜನಿಕರಿಗೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಿದರು.
ವಾಹನ ಸವಾರರು ರಸ್ತೆ ನಿಯಮ ಕಡ್ಡಾಯವಾಗಿ ಪಾಲನೆ ಮಾಡಬೇಕು. ನಿಮ್ಮ ಜೀವ ನೀವೇ ರಕ್ಷಿಸಿಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಹೆಲ್ಮೆಟ್ ಇಲ್ಲದೆ ಅಪಘಾತಗಳು ಹೆಚ್ಚಾಗಿ ಸಾವು ನೋವು ಸಂಭವಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ. ಕಾರಿನ ವಾಹನ ಚಾಲಕರು ಸೀಟ್ ಬೆಲ್ಟ್ ಧರಿಸಿದೆ ಚಾಲನೆ ಮಾಡುವುದರಿಂದ ಅಪಘಾತಗಳು ನಡೆಯುತ್ತಿದೆ ಈ ಬಗ್ಗೆ ಜಾಗೃತರಾಗಿ ವಾಹನ ಸವಾರರು ಹೆಲ್ಮೆಟ್ ಹಾಗೂ ಸೀಟ್ ಬೆಲ್ಟ್ ಅನ್ನು ಕಡ್ಡಾಯವಾಗಿ ಧರಿಸಬೇಕೆಂದು ಸಾರ್ವಜನಿಕರಿಗೆ ಅರಿವು ಮೂಡಿಸಿದರು.
ವಾಹನ ಸವಾರರು ಸಂಚಾರಿ ನಿಯಮ ಉಲ್ಲಂಘನೆ ನಿಯಮ ಪಾಲನೆ ಮಾಡದಿದ್ದರೆ ದಂಡ ವಿಧಿಸಲಾಗುವುದು. ಎಂದು ಪಿಐ ದೇಸಾಯಿ ತಿಳಿಸಿದರು.
ಈ ಸಂದರ್ಭದಲ್ಲಿ ಬೈಕ್ ಜಾಥದ ಕಾರ್ಯಕ್ರಮದಲ್ಲಿ ಪಿಎಸ್ಐ ಗಳಾದ ಸತೀಶ್ ನಾಯಕ್, ಶಿವರಾಜ್, ದರಪ್ಪ ಪೋಲಿಸ್ ಇಲಾಖೆಯ ಸಿಬ್ಬಂದಿ ವರ್ಗದವರು ಇದ್ದರು.