ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಶಾಸಕ ಟಿ ರಘುಮೂರ್ತಿ ಅಧಿಕಾರ ಸ್ವೀಕಾರ
1 min readಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಶಾಸಕ ಟಿ.ರಘುಮೂರ್ತಿ ಅಧಿಕಾರ ಸ್ವೀಕಾರ
ಚಿತ್ರದುರ್ಗ ಹೊಯ್ಸಳ ನ್ಯೂಸ್/
ಚಿತ್ರದುರ್ಗ :
ಚಳ್ಳಕೆರೆ ಕ್ಷೇತ್ರದಿಂದ ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಶಾಸಕ ಟಿ ರಘು ಮೂರ್ತಿಯವರು ಇಂದು ಸೋಮವಾರ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.
ಚಳ್ಳಕೆರೆ ಕ್ಷೇತ್ರ ಹಾಗೂ ಹಿರಿಯೂರು ಚಿತ್ರದುರ್ಗ ಸೇರಿದಂತೆ ಅಪಾರ ಅಭಿಮಾನಿಗಳ ಹರ್ಷೋದ್ಗಾರದ ನಡುವೆ ಅಧಿಕಾರ ಸ್ವೀಕರಿಸಿದ ಅವರು ಅಭಿಮಾನಿಗಳ ಕಡೆ ಕೈ ಬೀಸಿ ಸಂಭ್ರಮಿಸಿದರು ತನ್ನ ಗುರುತರ ಸೇವೆ ಕ್ಷೇತ್ರದ ಅಭಿವೃದ್ಧಿ ಪಕ್ಷಕ್ಕಾಗಿ ಶ್ರಮಿಸಿದ ತನ್ನ ಸೇವೆಯನ್ನು ಗುರುತಿಸಿ ಸರ್ಕಾರ ಈ ನಿಗಮದ ಅಧ್ಯಕ್ಷ ಸ್ಥಾನವನ್ನು ದಯಪಾಲಿಸಿದೆ.
ಈ ನಿಗಮದಿಂದ ಜನಸಾಮಾನ್ಯರಿಗೆ ಸಲ್ಲಬೇಕಾದ ಸೇವೆಯನ್ನು ಅವಿಶ್ಶಾಂತವಾಗಿ ಹಾಗೂ ಪ್ರಾಮಾಣಿಕವಾಗಿ ಸಲ್ಲಿಸುವದಾಗಿ ಅಭಿಮಾನಿಗಳಿಗೆ ಭರವಸೆ ನೀಡಿದರು, ತಮ್ಮ ಮೇಲೆ ವಿಶ್ವಾಸವಿಟ್ಟು ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಈ ನಿಗಮದ ಸೇವೆ ಸಲ್ಲಿಸಲು ಅನುವು ಮಾಡಿಕೊಟ್ಟ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಾಗೂ ಉಪಮುಖ್ಯಮಂತ್ರಿಗಳು ಪಕ್ಷದ ಅಧ್ಯಕ್ಷರು ಆದ ಡಿಕೆ ಶಿವಕುಮಾರ್ ಅವರಿಗೆ ನಾನು ಸದಾ ಆಭಾರಿಯಾಗಿರುತ್ತೇನೆಂದು ತಿಳಿಸಿದ ಅವರು ಕ್ಷೇತ್ರದ ಅಭಿವೃದ್ಧಿಗೆ ಇನ್ನಷ್ಟು ಪರಿಣಾಮಕಾರಿಯಾಗಿ ಸೇವೆ ಸಲ್ಲಿಸುವ ಆಶಯ ವ್ಯಕ್ತಪಡಿಸಿದರು.