ಇಂದು ತಾಯಿ ಮತ್ತು ಮಕ್ಕಳ ಆಸ್ಪತ್ರೆ ನೂತನ ಕಟ್ಟಡ ಉದ್ಘಾಟನೆ
1 min read
ತಾಯಿ ಮತ್ತು ಮಕ್ಕಳ ಆಸ್ಪತ್ರೆ ನೂತನ ಕಟ್ಟಡ ಉದ್ಘಾಟನೆ
ಚಿತ್ರದುರ್ಗ ಹೊಯ್ಸಳ ನ್ಯೂಸ್ /
ಚಿತ್ರದುರ್ಗ :
ಇಂದು ತಾಯಿ ಮತ್ತು ಮಕ್ಕಳ ಆಸ್ಪತ್ರೆ ನೂತನ ಕಟ್ಟಡ ಉದ್ಘಾಟನೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್‌ಹೆಚ್‌ಎಂ) ಅಡಿಯಲ್ಲಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ನಿರ್ಮಿಸಿರುವ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡದ ಉದ್ಘಾಟನಾ ಸಮಾರಂಭ ಇದೇ ಮಾರ್ಚ್ 06 ರಂದು ಬೆಳಿಗ್ಗೆ 10.30 ಕ್ಕೆ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವರು ಹಾಗೂ ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ ಉದ್ಘಾಟನೆ ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಭಾಗವಹಿಸುವರು. ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು.
ವಿಶೇಷ ಆಹ್ವಾನಿತರಾಗಿ ಕರ್ನಾಟಕ ಸಣ್ಣ ಕೈಗಾರಿಕಾ ಮಂಡಳಿ ಅಧ್ಯಕ್ಷರು ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಆಹಾರ ಮತ್ತು ನಾಗರಿಕ ಸಬರಾಜು ನಿಗಮ ಅಧ್ಯಕ್ಷರು ಹಾಗೂ ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ, ರಾಜ್ಯ ವಕ್ಸ್ ಮಂಡಳಿ ಅಧ್ಯಕ್ಷ ಕೆ.ಅನ್ವರ್ ಬಾಷಾ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ.ವೈ.ಎ.ನಾರಾಯಣಸ್ವಾಮಿ, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್ ಭಾಗವಹಿಸುವರು,
ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ತಿಳಿಸಿದ್ದಾರೆ.