May 23, 2024

Chitradurga hoysala

Kannada news portal

ಕಾರು ಬೈಕ್ ನಡುವೆ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಸಾವು

1 min read

ಕಾರು ಬೈಕ್ ನಡುವೆ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಸಾವು

ವರದಿ : ದ್ಯಾಮ ಕುಮಾರ್, 

ಚಿತ್ರದುರ್ಗ ಹೊಯ್ಸಳ ನ್ಯೂಸ್/ 

ಚಳ್ಳಕೆರೆ :

ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ನಡೆದಿದೆ.

ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗೇಟಿನ ಕ್ರಾಸಿನ ಬಳಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು

ಕಾರು ಗುದ್ದಿದ ರಭಸಕ್ಕೆ ಬೈಕ್ ಸವಾರನಾದ ಕೋನಿಗರಹಳ್ಳಿ ಗ್ರಾಮದ ಮಹಾಂತೇಶ ಎಂಬುವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಪತ್ನಿಯೊಂದಿಗೆ ಕೋನಿಗರಹಳ್ಳಿ ಗ್ರಾಮದಿಂದ ಹೆಗ್ಗೆರೆ ಗ್ರಾಮಕ್ಕೆ ತೆರಳುವಾಗ ಈ ಘಟನೆ ನಡೆದಿದ್ದು ಪತ್ನಿ ಪ್ರೇಮಾ ಅವರಿಗೆ ಕೈ ಮುರಿದಿದ್ದೆ ಹಾಗೂ ಕಾರಿನಲ್ಲಿ ಇದ 3 ಜನರಿಗೆ ಗಾಯಗಳಾಗಿದ್ದು ಸ್ಥಳೀಯರು ಇವರನ್ನು ಚಿಕಿತ್ಸೆಗಾಗಿ ಹತ್ತಿರದ ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಚಳ್ಳಕೆರೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಚಳ್ಳಕೆರೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

About The Author

Leave a Reply

Your email address will not be published. Required fields are marked *