ಮೊರಾರ್ಜಿ ದೇಸಾಯಿ ವಸತಿ ಕಾಲೇಜು: ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ
1 min readಚಿತ್ರದುರ್ಗ,ಆ15: ಚಿತ್ರದುರ್ಗದಲ್ಲಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಪ್ರವೇಶಕ್ಕೆ ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಪ್ರಸಕ್ತ ಸಾಲಿನ ಪ್ರಥಮ ಪಿಯುಸಿ ಪ್ರವೇಶಕ್ಕೆ ದಾಖಲಾತಿ ಪ್ರಾರಂಭವಾಗಿದ್ದು ವಿಜ್ಞಾನ ವಿಭಾಗದಲ್ಲಿ 60 ಸೀಟುಗಳು ಮತ್ತು ವಾಣಿಜ್ಯ ವಿಭಾಗದಲ್ಲಿ 60 ಸೀಟುಗಳು ಇರುತ್ತವೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಬಾಲಕಿಯರಿಗೆ ಶೇ.75 ರಷ್ಟು ಮೀಸಲಿದ್ದು ಇತರೆ ಸಮುದಾಯದ ಬಾಲಕಿಯರಿಗೆ ಶೇ.25 ಸೀಟುಗಳು ಕಾಯ್ದಿರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊರಾರ್ಜಿ ದೇಸಾಯಿ ವಸತಿ ಕಾಲೇಜು, ನಿರ್ಮಿತ ಕೇಂದ್ರ ಹತ್ತಿರ ಮೇದೆಹಳ್ಳಿ ಚಿತ್ರದುರ್ಗ 9739415001, ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸ್ಟೇಡಿಯಂ ರೋಡ್ ಚಿತ್ರದುರ್ಗ, ಹಾಗೂ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ 08194-234836 ಸಂಪರ್ಕಿಸಬಹುದು ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.