ಸಾಮಾಜಿಕ ಜಾಲತಾಣದ ಮೂಲಕ ಜನ ಸಹಾಯವಾಣಿ
1 min readಚಿತ್ರದುರ್ಗ.ಆ.14: ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಇಲಾಖೆಗಳ ಸಮಗ್ರ ಮಾಹಿತಿಯನ್ನು ರೈತರಿಗೆ ಹಾಗೂ ಸಾರ್ವಜನಿಕರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ನೀಡಲು ಯುಟ್ಯೂಬ್, ಫೇಸ್‍ಬುಕ್ ಮೂಲಕ ಜನ ಸಹಾಯವಾಣಿ ಎಂಬ ಅರಿವು ನೆರವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಆಗಸ್ಟ್ 20ರಂದು ಕೃಷಿ ಇಲಾಖೆ ಬಗ್ಗೆ ಮತ್ತು 26 ರಂದು ತೋಟಗಾರಿಕೆ ಇಲಾಖೆ ಬಗ್ಗೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಯೋಗೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.