ಇಟ್ಟಿಗೆ ಬಟ್ಟಿ ಕಾರ್ಮಿಕರ ಮೇಲೆ ಹಲ್ಲೆ ಆಸ್ಪತ್ರೆಗೆ ದಾಖಲಾದ ಕಾರ್ಮಿಕರನ್ನು ಭೇಟಿ ಮಾಡಿದ ಮಾಜಿ ಸಚಿವ ಆಂಜನೇಯ
1 min read
ಇಟ್ಟಿಗೆ ಬಟ್ಟಿ ಕಾರ್ಮಿಕರ ಮೇಲೆ ಹಲ್ಲೆ ಆಸ್ಪತ್ರೆಗೆ ದಾಖಲಾದ ಕಾರ್ಮಿಕರನ್ನು ಭೇಟಿ ಮಾಡಿದ ಮಾಜಿ ಸಚಿವ ಆಂಜನೇಯ
ಚಿತ್ರದುರ್ಗ ಹೊಯ್ಸಳ:
ವಿಜಯಪುರ:
ಇಟ್ಟಿಗೆ ಬಟ್ಟಿ ಕಾರ್ಮಿಕರ ಮೇಲೆ ಹಲ್ಲೆಯಿಂದ ಆಸ್ಪತ್ರೆಗೆ ದಾಖಲಾದ ಕಾರ್ಮಿಕರನ್ನು ಭೇಟಿ ಮಾಡಿ ಅರೋಗ್ಯ ವಿಚಾರಿಸಿದ ಮಾಜಿ ಸಚಿವ ಆಂಜನೇಯ ತೀವ್ರವಾಗಿ ಖಂಡಿಸಿ ಅಸ್ಪತ್ರೆಯಲ್ಲಿ ಇರುವ ನೊಂದ ಕಾರ್ಮಿಕರಿಗೆ ಸರ್ಕಾರದಿಂದ ನೆರವು ಕೊಡಿಸುವ ಭರವಸೆ ನೀಡಿದರು.
ವಿಜಯಪುರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂವರು ಕಾರ್ಮಿಕರನ್ನು ಶುಕ್ರವಾರ ಭೇಟಿ ಮಾಡಿದ ಆಂಜನೇಯ ಅವರು, ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಫೋನ್ ಮೂಲಕ ಮಾತನಾಡಿಸಿದಾಗ ಚಿಕಿತ್ಸೆ ಪಡೆಯುತ್ತಿರುವ ಕಾರ್ಮಿಕರನ್ನು ಆರೋಗ್ಯ ವಿಚಾರಿಸಿ ಧೈರ್ಯ ತುಂಬಿ.ಕಾರ್ಮಿಕರಿಗೆ ಸರ್ಕಾರದಿಂದ ನೆರವಿನ ಭರವಸೆ ನೀಡಿದ್ದಾರೆ.
ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಇಟ್ಟಿಗೆ ಬಟ್ಟಿಯಲ್ಲಿ ಕೆಲ ಮಾಡುತ್ತಿದ್ದ ಮೂವರು ಕಾರ್ಮಿಕರ ಮೇಲಿನ ಹಲ್ಲೆ ನಡೆಸಿರುವುದು ಖಂಡನೀಯ ಹಾಗೂ ಅಮಾನವೀಯ ಕ್ರೌರ್ಯ ಇಲ್ಲಿ ನಡೆದಿದೆ. ಸಿಎಂ ಸಿದ್ದರಾಮಯ್ಯ ಅವರು ನೊಂದ ಕಾರ್ಮಿಕರ ಜೊತೆ ಫೋನ್‌ನಲ್ಲಿ ಮಾತನಾಡಿ.ಅರೋಗ್ಯ ವಿಚಾರಿಸಿ ದೈರ್ಯ ವನ್ನು ತುಂಬಿ ನೀವು ಯಾವುದಕ್ಕೂ ಹೆದರಬೇಡಿ ಎಂದು ಕಾರ್ಮಿಕರಿಗೆ ಸಿಎಂ, ಹೇಳಿದ್ದಾರೆ ನೊಂದವರಿಗೆ ಸಹಾಯ ಸಹಕಾರ ನೀಡುತ್ತೇವೆ ,ಹಲ್ಲೆ ಮಾಡಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದಗಿಯೂ ಭರವಸೆ ನೀಡಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ನೆರವಿನ ಭರವಸೆ ನೀಡಿದ್ದಾರೆ ಎಂದರು.
ಈ ವೇಳೆ ಕಾರ್ಮಿಕರು ಬಿಚ್ಚಿಟ್ಟ ಸಂಗತಿ ಅತ್ಯಂತ ಕರಾಳವಾದುದು. ಇಟ್ಟಿಗೆ ಬಟ್ಟಿ ಮಾಲೀಕರು ಮೂರು ದಿನಗಳ ಕಾಲ ಥಳಿಸಿ ಅವರೇ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಅವರ ಸಂಬಂಧಿಕರಿಗೆ ಕಳುಹಿಸಿದ್ದಾರೆ.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಅವರು ಸಚಿವ ಎಂ.ಬಿ. ಪಾಟೀಲರ ನಿರ್ದೇಶನದ ಮೇರೆಗೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಕಾರ್ಮಿಕರ ಆರೋಗ್ಯ ವಿಚಾರಿಸಿದ್ದೇನೆ. ಆ ರೀತಿ ಉಗ್ರ ಶಿಕ್ಷೆ ನೀಡಿ ಸಂಭವನೀಯ ಕೃತ್ಯ ತಡೆಯಬೇಕೆಂದು ಒತ್ತಾಯಿಸಿದ್ದಾರೆ ಹೀಗಾಗಿ ಅಪರಾಧಿಗಳಿಗೆ ಗಲ್ಲು ಶಿಕ್ಷೆಯಾಗಬೇಕು. ಬೇರೆಯವರು ಇಂಥ ಧೋರಣೆ ಅನುಕರಣೆ ಮಾಡಬಾರದು ಎಂದು ತಿಳಿಸಿದರು.
ಕಾರ್ಮಿಕರಿಗೆ ಭೂಮಿ ಒಡೆತನ ಯೋಜನೆಯಡಿ ಭೂಮಿ ಕೊಡಿಸಲು, ಜಮೀನುಗಳಿಗೆ ಬೋರ್ ವೆಲ್ ಕೊಡಿಸಲು ನಿಗಮದಲ್ಲಿ ಅವಕಾಶ ಇದೆ. ಮನೆ ಸೌಲಭ್ಯ ಸಹ ಯೋಜನೆ ನೀಡಬಹುದು ಅದನ್ನು ಕಲ್ಪಿಸಲು ಸಿಎಂ ಗಮನಕ್ಕೆ ತರಲಾಗಿದೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಮುಖಂಡರು, ಸದಸ್ಯರು ಮತ್ತಿತರ ಇದ್ದರು.