BIG BREKING ದೇಶದಲ್ಲಿ 24 ಗಂಟೆಯಲ್ಲಿ 63489 ಕೋವಿಡ್.
1 min readನವದೆಹಲಿ: ದೇಶದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 63,489 ಕೊರೋನಾ ಪ್ರಕರಣ ದಾಖಲಾಗುವ ಮೂಲಕ ಸೋಂಕಿತರ ಸಂಖ್ಯೆ 25,89,682ಕ್ಕೆ ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ.
ಇನ್ನು ಒಂದೇ ದಿನ 944 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂಡ 49,980ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ಮಾಡಿದೆ.
ಒಟ್ಟು 25,89,682 ಸೋಂಕಿತರ ಪೈಕಿ 18,62,258 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ದೇಶದಲ್ಲಿನ್ನೂ 6,77,444 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.
ಇನ್ನೊಂದೆಡೆ ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 7,46,608 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು,ಇಲ್ಲಿವರೆಗೂ 2,93,09,703 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.