ಬೆಂಗಳೂರು: ರಾಜ್ಯದ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಕೋವಿಡ್ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಸರ್ಕಾರಿ ಸ್ವಾಮ್ಯದ ಬೋರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ತನಗೆ ಚಿಕಿತ್ಸೆ ನೀಡಿದ ಎಲ್ಲಾ ಸಿಬ್ಬಂದಿಗಳ ಜೊತೆಯಲ್ಲಿ ಗ್ರೂಪ್ ಫೋಟೋ ಸಹ ತೆಗೆಸಿಕೊಂಡಿದ್ದಾರೆ.