February 26, 2024

Chitradurga hoysala

Kannada news portal

ಜಿಲ್ಲೆಯಲ್ಲಿ 67 ಜನರಿಗೆ ಕೋವಿಡ್ ಸೋಂಕು ದೃಢ: ಸೋಂಕಿತರ ಸಂಖ್ಯೆ 1,530 ಕ್ಕೆ ಏರಿಕೆ

1 min read

ಚಿತ್ರದುರ್ಗ, ಆ.16:
ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಭಾನುವಾರದ ವರದಿಯಲ್ಲಿ ಮತ್ತೆ 67 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1,530 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಭಾನುವಾರ 120 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 34, ಹಿರಿಯೂರು 01, ಹೊಸದುರ್ಗ 23 ಹಾಗೂ ಹೊಳಲ್ಕೆರೆ 09 ಸೇರಿದಂಥೆ ಒಟ್ಟು 67 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಭಾನುವಾರ ಒಟ್ಟು 618 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದ್ದು, ವರದಿಯಲ್ಲಿ 67 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 1,530 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 19 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೇ 992 ಜನರು ಗುಣಮುಖರಾಗಿ ಬಿಡುಗಡೆಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 518 ಸಕ್ರಿಯ ಪ್ರಕರಣಗಳು ಇವೆ.
ಸದ್ಯ ಜಿಲ್ಲೆಯಲ್ಲಿ ಒಟ್ಟು 459 ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 9,517 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

ಈವರೆಗೆ 29,691 ಜನರ ಮಾದರಿ ಸಂಗ್ರಹಿಸಲಾಗಿದ್ದು, 22,314 ಜನರ ವರದಿ ನೆಗೆಟೀವ್ ಬಂದಿದೆ. ಉಳಿದ 5,544 ಜನರ ವರದಿ ಬರುವುದು ಬಾಕಿ ಇದೆ. 303 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *