March 3, 2024

Chitradurga hoysala

Kannada news portal

ಮೂರು ಮೀನುಗಾರರು ಸಾವು, ಓರ್ವ ನಾಪತ್ತೆ

1 min read

ಉಡುಪಿ: ಉಡುಪಿ ಜಿಲ್ಲೆ ಬೈಂದೂರು ತಾಲೂಕಿನಲ್ಲಿ ದೋಣಿ ದುರಂತ: ಮೂವರು ಮೀನುಗಾರರು ಸಾವು , ಓರ್ವ ನಾಪತ್ತೆ

ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದ ಅಲೆಗಳ ಹೊಡೆತಕ್ಕೆ ಪಲ್ಟಿಯಾಗಿ ಮೂವರು ಮೀನುಗಾರರು ಸಾವನ್ನಪ್ಪಿ ಓರ್ವ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ಉಡುಪಿ ಜಿಲ್ಲೆಯ‌ ಬೈಂದೂರು ತಾಲೂಕಿನ ಕೊಡೇರಿಯಲ್ಲಿ ರವಿವಾರ ಮಧ್ಯಾಹ್ನ ಸಂಭವಿಸಿದೆ..

ದೋಣಿಯಲ್ಲಿ ಒಟ್ಟು ಒಂಬತ್ತು ಮಂದಿ ಮೀನುಗಾರರು ಇದ್ದು ಮೀನುಗಾರಿಕೆಗೆ ತೆರಳುತ್ತಿದ್ದ ವೇಳೆ ಸಮುದ್ರದ ದೈತ್ಯ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಪಲ್ಟಿಯಾಗಿದೆ. ಪರಿಣಾಮ ಮೂವರು ಮೀನುಗಾರರು ಸಾವನ್ನಪ್ಪಿದ್ದಾರೆ ಓರ್ವ ನಾಪತ್ತೆಯಾಗಿದ್ದು ಉಳಿದವರನ್ನು ರಕ್ಷಣೆ ಮಾಡಲಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ನಾಪತ್ತೆಯಾದ ಮೀನುಗಾರನ ಪತ್ತೆ ಕಾರ್ಯ ಮುಂದುವರೆದಿದೆ.

About The Author

Leave a Reply

Your email address will not be published. Required fields are marked *