May 17, 2025

Chitradurga hoysala

Kannada news portal

ಹೆಲ್ತ್ ಬುಲೆಟಿನ್ ಜಿಲ್ಲೆಯಲ್ಲಿ 45 ಜನರಿಗೆ ಕೋವಿಡ್ ಸೋಂಕು ದೃಢ : ಸೋಂಕಿತರ ಸಂಖ್ಯೆ 1596 ಕ್ಕೆ ಏರಿಕೆ

1 min read

ಚಿತ್ರದುರ್ಗ ಆ. 18:
ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 45 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1596 ಕ್ಕೆ ಏರಿಕೆಯಾದಂತಾಗಿದೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಮಂಗಳವಾರ 82 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 1, ಹಿರಿಯೂರು-15, ಚಳ್ಳಕೆರೆ-2, ಹೊಸದುರ್ಗ-9 ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲಿ 4 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 14 ಸೇರಿದಂತೆ ಒಟ್ಟು 45 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಮಂಗಳವಾರ ಒಟ್ಟು 812 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 45 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 1596 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 19 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 1146 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 430 ಸಕ್ರಿಯ ಪ್ರಕರಣಗಳು ಇವೆ.
ಸದ್ಯ ಜಿಲ್ಲೆಯಲ್ಲಿ ಒಟ್ಟು 507 ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 11117 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

ಈವರೆಗೆ 30880 ಜನರ ಮಾದರಿ ಸಂಗ್ರಹಿಸಲಾಗಿದ್ದು, 233252 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 5620 ಜನರ ವರದಿ ಬರುವುದು ಬಾಕಿ ಇದೆ. 339 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *