ಹೆಲ್ತ್ ಬುಲೆಟಿನ್ ಜಿಲ್ಲೆಯಲ್ಲಿ 54 ಜನರಿಗೆ ಕೋವಿಡ್ ಸೋಂಕು ದೃಢ : ಸೋಂಕಿತರ ಸಂಖ್ಯೆ 1650 ಕ್ಕೆ ಏರಿಕೆ
1 min readಚಿತ್ರದುರ್ಗ ಆ. 19:
ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ 54 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1650 ಕ್ಕೆ ಏರಿಕೆಯಾದಂತಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 18, ಹಿರಿಯೂರು-7, ಚಳ್ಳಕೆರೆ-13, ಹೊಸದುರ್ಗ-9 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 7 ಸೇರಿದಂತೆ ಒಟ್ಟು 54 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಬುಧವಾರ ಒಟ್ಟು 683 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 54 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 1650 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 19 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 1146 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 484 ಸಕ್ರಿಯ ಪ್ರಕರಣಗಳು ಇವೆ.
ಸದ್ಯ ಜಿಲ್ಲೆಯಲ್ಲಿ ಒಟ್ಟು 507 ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 12073 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.