May 17, 2024

Chitradurga hoysala

Kannada news portal

ದಾವಣಗೆರೆ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಹುದ್ದೆಗೆ ನೇರ ನೇಮಕಾತಿ

1 min read

ಬೆಂಗಳೂರು, ಆಗಸ್ಟ್ 18 : ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಹುದ್ದೆಗೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತರು ಆಗಸ್ಟ್ 25ರಂದು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎ. ಆರ್. ಟಿ ಪ್ಲಸ್ ವಿಭಾಗಕ್ಕೆ ಗುತ್ತಿಗೆ ಆಧಾರದ ಮೇಲೆ ವೈದ್ಯಾಧಿಕಾರಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಗಸ್ಟ್ 25ರಂದು ತಮ್ಮ ಮೂಲ ದಾಖಲಾತಿಗಳೊಂದಿಗೆ ಆಸಕ್ತರು ಬೆಳಗ್ಗೆ 11ಗಂಟೆಗೆ ನೇರ ಸಂದರ್ಶನಕ್ಕೆ ಎ. ಆರ್. ಟಿ ಪ್ಲಸ್ ವಿಭಾಗ, ಚಿಗಟೇರಿ ಜಿಲ್ಲಾ ಆಸ್ಪತ್ರೆ ಇಲ್ಲಿಗೆ ಹಾಜರಾಗಬಹುದುಒಂದು ವೈದ್ಯಾಧಿಕಾರಿ ಹುದ್ದೆ ಖಾಲಿಯಿದೆ. ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಮಾಸಿಕ 36 ಸಾವಿರ ವೇತನ ನೀಡಲಾಗುತ್ತದೆ.

ನೇರ ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಯು ಎಂ. ಬಿ. ಬಿ. ಎಸ್‍. ಉತ್ತೀಣರಾಗಿರಬೇಕು. ವಯೋಮಿತಿ 70 ವರ್ಷದೊಳಗಿರಬೇಕು ಎಂದು ಪ್ರಕಟಣೆ ತಿಳಿಸಿದೆ.

About The Author

Leave a Reply

Your email address will not be published. Required fields are marked *