November 8, 2024

Chitradurga hoysala

Kannada news portal

ಜಿಲ್ಲೆಯಲ್ಲಿ 67 ಜನರಿಗೆ ಕೋವಿಡ್ ಸೋಂಕು ದೃಢ : ಸೋಂಕಿತರ ಸಂಖ್ಯೆ 1712 ಕ್ಕೆ ಏರಿಕೆ

1 min read

ಚಿತ್ರದುರ್ಗ ಆ. 20:
ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಗುರುವಾರದ ವರದಿಯಲ್ಲಿ 67 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1712 ಕ್ಕೆ ಏರಿಕೆಯಾದಂತಾಗಿದೆ.
ಜಿಲ್ಲೆಯಲ್ಲಿಂದು ವಿವಿದೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 21 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 14, ಹಿರಿಯೂರು-7, ಚಳ್ಳಕೆರೆ-4, ಹೊಸದುರ್ಗ-3, ಮೊಳಕಾಲ್ಮುರು 28 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 11 ಸೇರಿದಂತೆ ಒಟ್ಟು 67 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಗುರುವಾರ ಒಟ್ಟು 535 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 67 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 1712 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 19 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 1167 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 530 ಸಕ್ರಿಯ ಪ್ರಕರಣಗಳು ಇವೆ.
ಸದ್ಯ ಜಿಲ್ಲೆಯಲ್ಲಿ ಒಟ್ಟು 516 ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 12073 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

ಈವರೆಗೆ 31563 ಜನರ ಮಾದರಿ ಸಂಗ್ರಹಿಸಲಾಗಿದ್ದು, 23742 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 4293 ಜನರ ವರದಿ ಬರುವುದು ಬಾಕಿ ಇದೆ. 351 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *