ವಿಶ್ವಕರ್ಮ ಅಭಿವೃದ್ಧಿ ನಿಗಮ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
1 min readಚಿತ್ರದುರ್ಗ,ಆ.20: ಕರ್ನಾಟಕ ವಿಶ್ವಕರ್ಮ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 16 ಕೊನೆಯ ದಿನ. ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು ಯೋಜನೆ, ಸ್ವಯಂ ಉದ್ಯೋಗ ಸಾಲ, ಬ್ಯಾಂಕ್ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ, ಅರಿವು ಶೈಕ್ಷಣಿಕ ಸಾಲ, ಗಂಗಾ ಕಲ್ಯಾಣ ವೈಯಕ್ತಿಕ ನೀರಾವರಿ, ಮಹಿಳೆಯರಿಗೆ ಮೈಕ್ರೋ ಕ್ರೆಡಿಟ್ ಸಾಲ, ಸಾಂಪ್ರದಾಯಿಕ ವೃತ್ತಿ ಸಾಲ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.ಅರ್ಜಿಗಳನ್ನು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಡಿ.ದೇವರಾಜು ಅರಸು ಹಿಂದುಳಿದ ವರ್ಗಳ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಅರ್ಜಿಗಳು ದೊರೆಯುತ್ತವೆ.ಅರ್ಹತೆಗಳು: ಅರ್ಹ ಫಲಾನುಭವಿಗಳು ವಿಶ್ವಕರ್ಮ ಮತ್ತು ಇದರ ಉಪಜಾತಿಗೆ ಸೇರಿದವರಾಗಿರಬೇಕು, ಸರ್ಕಾರದ ಯಾವುದಾದರು ನಿಗಮಗಳ ಯೋಜನೆ ಪಡೆದಲ್ಲಿ ಅಂತವರು ಈ ಯೋಜನೆಯ ಸೌಲಭ್ಯ ಪಡೆದಿದ್ದಲ್ಲಿ ಮತ್ತೊಮ್ಮೆ ಸೌಲಭ್ಯ ಪಡೆಯಲು ಅರ್ಹರಲ್ಲ, ಒಂದು ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚಿನವರಿಗೆ ಸೌಲಭ್ಯ ಒದಗಿಸಲಾಗುವುದಿಲ್ಲ, ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರ ಕಚೇರಿ 08194-220882 ಸಂಪರ್ಕಿಸಿ ಎಂದು ಜಿಲ್ಲಾ ವ್ಯವಸ್ಥಾಪಕ ವಿ.ರಘನಾಥ್ ತಿಳಿಸಿದ್ದಾರೆ.