ಸರ್ಕಾರದ ಮಾರ್ಗಸೂಚನೆಯಂತೆ ಹಬ್ಬ ಆಚರಿಸಿ: ಡಿಸಿ
1 min readಚಿತ್ರದುರ್ಗ,ಆ.21:ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟುವ ಹಿನ್ನಲೆಯಲ್ಲಿ ಗಣೇಶ ಚತುರ್ಥಿ ಹಾಗೂ ಮೊಹರಂ ಹಬ್ಬವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸೂಚನೆಗಳು ಮತ್ತು ಮಾರ್ಗಸೂಚನೆಗಳನ್ನು ಪಾಲಿಸಿ ಹಬ್ಬ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ. ಜಿಲ್ಲೆಯ ಜನರು ಕಡ್ಡಾಯವಾಗಿ ಮುಖಗವಸು ಧರಿಸಿ, ಸ್ಯಾನಿಟೈಸರ್ ಬಳಸಿ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು, ಶಾಂತಿ ಸುವ್ಯವಸ್ಥೆ ಹಾಗೂ ಸಾಮರಸ್ಯದಿಂದ ಆಚರಿಸಲು ಜಿಲ್ಲಾಧಿಕಾರಿಗಳು ಕೋರಿದ್ದಾರೆ