ಡಿಪ್ಲೊಮಾ ಪ್ರವೇಶ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
1 min readಚಿತ್ರದುರ್ಗಆ.21: ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಹಿರಿಯೂರಿನ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಾತಿಯನ್ನು ಆನ್‍ಲೈನ್-ನಾನ್ ಇಂಟರಾಕ್ವೀವ್ ಕೌನ್ಸಲಿಂಗ್ (ಆನ್‍ಲೈನ್ ಆಪ್ಷನ್ ಎಂಟ್ರಿ) ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ಆಗಸ್ಟ್ 29 ರವರೆಗೆ ವಿಸ್ತರಿಸಲಾಗಿದೆ.ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಸಲ್ಲಿಸುವ ಅರ್ಜಿಯೊಂದಿಗೆ ವಿವಿಧ ಪ್ರವರ್ಗಗಳಡಿ ಪ್ರವೇಶ ಬಯಸಿದ್ದಲ್ಲಿ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಆರ್.ಡಿ. ನಂಬರ್, ಕನ್ನಡ ವ್ಯಾಸಂಗ ಪ್ರಮಾಣ ಪತ್ರ, ಗ್ರಾಮೀಣ ವ್ಯಾಸಂಗ ಪ್ರಮಾಣ ಪತ್ರದ ದಾಖಲೆಗಳೊಂದಿಗೆ ಅಪ್‍ಲೋಡ್ ಮಾಡುವುದು. ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 29ರ ಸಂಜೆ 5.00 ಗಂಟೆಯವರೆಗೆ ವಿಸ್ತರಿಸಲಾಗಿದೆ. ಅಭ್ಯರ್ಥಿಗಳು, ಪೋಷಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹಿರಿಯೂರು ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.