ಮುಖ್ಯಮಂತ್ರಿಗಳಿಗೆ ದೇವರಾಜ ಅರಸು ಬಗ್ಗೆ ಕನಿಷ್ಠ ಗೌರವ ಇದ್ದರೆ ಕೂಡಲೇ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ರದ್ದು ಮಾಡಲಿ-ಮಾಜಿ ಸಂಸದ ಬಿ.ಎನ್.ಚಂದ್ರಪ್ಪ
1 min read
ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ಇಡೀ ರಾಜ್ಯದ ಜನತೆಗೆ ಸಾಮಾಜಿಕ ನ್ಯಾಯ ನೀಡುವ ಉದ್ದೇಶದಿಂದ ಜಾರಿಗೆ ತಂದ ಕ್ರಾಂತಿಕಾರಿ ಸುಧಾರಣೆಗಳಾದ ಭೂ ಸುಧಾರಣೆ, ಉಳುವವನೇ ಹೊಲದೊಡೆಯ ಕಾನೂನುಗಳನ್ನು ಜಾರಿಗೆ ತಂದರೆ ಹಾಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಉಳ್ಳವನೆ ಭೂ ಒಡೆಯನಾಗಲು ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಜಾರಿಗೊಳಿಸುವ ಮೂಲಕ ರೈತ, ದಲಿತ, ಹಿಂದುಳಿವ ವಿರೋಧಿ ನಿಲುವು ತಾಳಿದ್ದಾರೆಂದು ಮಾಜಿ ಸಂಸದರಾದ ಬಿ.ಎನ್.ಚಂದ್ರಪ್ಪನವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ದೇವರಾಜ ಅರಸು ಅವರ ಜಂಯತಿಯನ್ನು ನೆಪಕ್ಕೆ ಮುಖ್ಯಮಂತ್ರಿ ಆಚರಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಇದ್ದಾಗ ದೇವರಾಜ ಅರಸು ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುತ್ತಿತ್ತು. ಆ ಪ್ರಶಸ್ತಿಯನ್ನು ಮುಖ್ಯಮಂತ್ರಿಗಳು ರದ್ದು ಮಾಡಿದ್ದಾರೆ ಎಂದು ದೂರಿದರು.
ಅರಸು ಅವರು ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಹಾವನೂರು ಆಯೋಗ ರಚಿಸದಿದ್ದರು ಆದರೆ ಹಾಲಿ ಮುಖ್ಯಮಂತ್ರಿಗಳು ಹಿಂದುಳಿದ ಜಾತಿಗಳ ಗುರುತಿಸಿ ನ್ಯಾಯ ನೀಡುವಲ್ಲಿ ವಿಫಲರಾಗಿದ್ದಾರೆಂದು ಆರೋಪಿಸಿದರು.
ಕರ್ನಾಟಕ ನಾಮಕರಣ, ಹಾವನೂರು ಕಮಿಷನ್, ಭೂ ಸುಧಾರಣೆ, ಮಲ ಹೊರುವ ಪದ್ಧತಿ ನಿಷೇಧ, ಜೀತ ಪದ್ಧತಿ ನಿರ್ಮೂಲನೆ ಹಾಗೂ ಶೋಷಿತ ಸಮುದಾಯಕ್ಕೆ ರಾಜಕೀಯ ಆಸರೆ ಒದಗಿಸಿದ ಮಹಾನ್ ನಾಯಕ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನದವನ್ನು ಅತ್ಯಂತ ವಿಶೇಷವಾಗಿ ಮಾಡಬೇಕಿದ್ದ ಬಿಜೆಪಿ ಸರ್ಕಾರ ನೆಪಕ್ಕೆ ಮಾಡಿದೆ ಎಂದು ದೂರಿದರು.
ಜೀತ ಪದ್ಧತಿ ನಿರ್ಮೂಲನೆ ಹಾಗೂ ಶೋಷಿತ ಸಮುದಾಯಕ್ಕೆ ರಾಜಕೀಯ ಆಸರೆ ಒದಗಿಸಿದ ಮಹಾನ್ ನಾಯಕ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನದ ಸಂದರ್ಭದಲ್ಲಿ ಅವರ ಯೋಜನೆಗಳನ್ನು ಮತ್ತಷ್ಟು ವಿಸ್ತರಿಸಬೇಕಿತ್ತು. ಶೋಷಿತ ಸಮುದಾಯಕ್ಕೆ ನ್ಯಾಯ ಒದಗಿಸುವ ಭರದಲ್ಲಿ ಇತರ ಸಮುದಾಯಗಳ ಮೇಲೆ ಸವಾರಿ ಮಾಡದ ರಾಜಕೀಯ ಸೂಕ್ಷ್ಮ ಪ್ರಜ್ಞೆ ಅರಸು ಅವರಲ್ಲಿತ್ತು. ಸಾಮಾಜಿಕ, ಆರ್ಥಿಕ ಸುಧಾರಣೆಗಳ ಹರಿಕಾರ ಅರಸು ಸದಾ ಸ್ಮರಣೀಯರು. ಇಂತಹ ಮಹಾನ್ ನಾಯಕ ಡಿ. ದೇವರಾಜ ಅರಸು ಅವರ ಜನ್ಮದಿನದ ಸಂದರ್ಭದಲ್ಲಿ ವಿನಮ್ರವಾಗಿ ನಾವೆಲ್ಲರೂ ಸ್ಮರಿಸಿಕೊಳ್ಳಬೇಕು. ಆದರೆ ಮುಖ್ಯಮಂತ್ರಿ ಯಡಿಯೂರಪ್ಪನವರು ದೇವರಾಜ ಅರಸು ಅವರ ಯೋಜನೆಗಳಿಗೆ ತಿಲಾಂಜಲಿ ನೀಡಿ ಬೂಟಾಟಿಕೆಗಾಗಿ ಅರಸು ಬಳಸುತ್ತಿದ್ದ ಕಾರನ್ನು ಪ್ರದರ್ಶನ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದ ಅವರು ಬೂಟಾಟಿಕೆಯಿಂದ ನಡೆದುಕೊಳ್ಳುತ್ತಿದ್ದಾರೆಂದು ಚಂದ್ರಪ್ಪನವರು ದೂರಿದರು.
ಮುಖ್ಯಮಂತ್ರಿ ಗಳಿಗೆ ಅರಸು ಬಗ್ಗೆ ಕನಿಷ್ಠ ಗೌರವ ಇದ್ದರೆ ಕೂಡಲೇ ಅವರು ತಿದ್ದುಪಡಿ ಮಾಡಿರುವ ಭೂ ಸುಧಾರಣೆ ಕಾಯ್ದೆ ರದ್ದು ಮಾಡಲಿ, ಹಣ ಇದ್ದವರಿಗೆ ಭೂಮಿ ಸಿಗುವಂತ ಕಾಯ್ದೆ ಜಾರಿಗೆ ತಂದು ರಾಜ್ಯದ ಸಾಮಾನ್ಯ ಜನರನ್ನು ಬೀದಿಗೆ ನಿಲ್ಲಿಸದಂತೆ ತುರ್ತು ಕ್ರಮ ಕೈಗೊಳ್ಳಲಿ ಎಂದು ಮಾಜಿ ಸಂಸದರು ಸವಾಲ್ ಹಾಕಿದರು.