ಜಿಮ್ ಸ್ಥಾಪನೆ ಸಹಾಯಧನಕ್ಕೆ ಅರ್ಜಿ ಆಹ್ವಾನ
1 min readಜಿಮ್ ಸ್ಥಾಪನೆ: ಸಹಾಯಧನಕ್ಕೆ ಅರ್ಜಿ ಆಹ್ವಾನಚಿತ್ರದುರ್ಗ,ಆ .21: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2020-21 ನೇ ಸಾಲಿನ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಅಡಿಯಲ್ಲಿ 2019 ನೇ ವರ್ಷದಲ್ಲಿ ಅಂತರರಾಷ್ಟ್ರಿಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನ ನೀಡಲು ಅನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 10 ಕೊನೆಯ ದಿನ.ಆಸಕ್ತ ಕ್ರೀಡಾಪಟುಗಳು ಆನ್‍ಲೈನ್‍ನಲ್ಲಿ ಅರ್ಜಿಗಳನ್ನು ಸಲ್ಲಿಸಿ ನಂತರ ಈ ಕಚೇರಿಯಿಂದ ಅರ್ಜಿಯನ್ನು ಪಡೆದು ಆನ್‍ಲೈನ್ ಅರ್ಜಿಯೊಂದಿಗೆ ಎಲ್ಲಾ ದಾಖಲಾತಿಗಳನ್ನು ಲಗತ್ತಿಸಿ ಅಂತಿಮ ದಿನಾಂಕದೊಳಗೆ ಕಚೇರಿಗೆ ಸಲ್ಲಿಸತಕ್ಕದ್ದು. ಕೊನೆಯ ದಿನಾಂಕದ ನಂತರ ಬರುವ ಅರ್ಜಿಗಳನ್ನು ಪ್ರೋತ್ಸಾಹಧನಕ್ಕೆ ಪರಿಗಣಿಸಲಾಗುವುದಿಲ್ಲ.ಅರ್ಜಿಗಳನ್ನು http:/karunadu.karnataka.gov.in/dyes ವೆಬ್‍ಸೈಟ್ ಮೂಲಕ ಅಪ್‍ಲೋಡ್ ಮಾಡಲು ತಿಳಿಸಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: 08194-235635 ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.