ಡಿಪ್ಲೊಮಾ ಪ್ರವೇಶ: ವಿಶೇಷಚೇತನರಿಂದ ಅರ್ಜಿ ಆಹ್ವಾನ
1 min readಚಿತ್ರದುರ್ಗ,ಆ.21:ಮೈಸೂರು ಜೆಎಸ್‍ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ವತಿಯಿಂದ ಪ್ರಸಕ್ತ ಸಾಲಿನ ಮೂರು ವರ್ಷಗಳ ಅವಧಿ ಡಿಪ್ಲೊಮಾ ಕೊರ್ಸ್‍ಗಳ ಪ್ರವೇಶಕ್ಕೆ ವಿಶೇಷಚೇತನ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 12 ಕೊನೆಯ ದಿನ. ಅನುದಾನಿತ ಕೋರ್ಸುಗಳಾದ ಆರ್ಕಿಟೆಕ್ಟರ್, ಕಮರ್ಷಿಯಲ್ ಪ್ರಾಕ್ಟೀಸ್ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರ್, ಅನುದಾನ ರಹಿತ ಕೋರ್ಸುಗಳಾದ ಜ್ಯುಯಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಇಂಜಿನಿಯರಿಂಗ್, ಕಂಪ್ಯೂಟರ್ ಅಪ್ಲಿಕೇಷನ್ ಫಾರ್ ದಿ ವಿಷ್ಯುಯಲಿ ಇಂಪೇರ್ಡ್ ಕೋರ್ಸುಗಳು ಲಭ್ಯವಿವೆ.ಪ್ರವೇಶ ಪಡೆಯಲು ಅರ್ಹತೆ: ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ ಶೇ.35 ಅಂಕಗಳೊಂದಿಗೆ ತೇರ್ಗಡೆ ಹಾಗೂ ಅಂಗವೈಕಲ್ಯತೆ ಲಕ್ಷಣಗಳನ್ನು ಹೊಂದಿರಬೇಕು.ಮೂಳೆ ಮತ್ತು ಕೀಲು ಅಂಗವಿಕಲತೆ ಶೇ.40 ಮತ್ತು ಮೇಲ್ಪಟ್ಟು, ಕಿವುಡು ಮತ್ತು ಮೂಗು ಅಂಗವಿಕಲತೆ 60 ಡಿಬಿ ಮತ್ತು ಮೇಲ್ಪಟ್ಟು, ಭಾಗಶಃ ಮತ್ತು ಪೂರ್ಣ ಅಂಧತ್ವ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಜ್ಯುಯಲರಿ ಡಿಸೈನ್ ಮತ್ತು ಟೆಕ್ನಾಲಜಿ ಕೋರ್ಸಿಗೆ ಸಾಮಾನ್ಯ (ವಿಶೇಷಚೇತನರಲ್ಲದ) ಅಭ್ಯರ್ಥಿಗಳೂ ಸಹ ಜೆಎಸ್‍ಎಸ್ ಮಹಾವಿದ್ಯಾಪೀಠದ ಯೋಜನೆಯಡಿಯಲ್ಲಿ ಪ್ರವೇಶ ಪಡೆಯಬಹುದು. ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ವಿದ್ಯಾರ್ಥಿವೇತನದ ಆರ್ಥಿಕ ಸಹಾಯ ದೊರೆಯುತ್ತದೆ. ಪಾಲಿಟೆಕ್ನಿಕ್ ಯಶಸ್ವಿ ವಿದ್ಯಾಥಿಗಳಿಗೆ ಉದ್ಯೋಗ ಮತ್ತು ತರಬೇತಿ ಕೆಂದ್ರದ ಮೂಲಕ ಉದ್ಯೋಗಾವಕಾಶ ಕಲ್ಪಿಸಿಕೊಡಲಾಗುತ್ತದೆ. ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಿದ್ಯಾರ್ಥಿನಿಲಯದ ಸೌಲಭ್ಯ ಕಲ್ಪಿಸಲಾಗಿದೆ.ಪ್ರವೇಶ ಅರ್ಜಿಗಳನ್ನು (ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.100/- ಹಾಗೂ ಎಸ್‍ಸಿ. ಎಸ್‍ಟಿ, ಸಿ-1 ವರ್ಗದವರಿಗೆ ರೂ.50/-) ನಗದು ಅಥವಾ ಡಿಡಿ, ಎಂಒ ಮೂಲಕ principal, JSSPDA, Mysuru ಇವರ ಹೆಸರಿಗೆ ಮೈಸೂರಿನಲ್ಲಿ ಸಂದಾಯವಾಗುವಂತೆ ಕಳುಹಿಸಿ ಪಡೆಯಬಹುದು. ಅಥವಾ ವೆಬ್‍ಸೈಟ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು.ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್: www.jsspda.org ಇ ಮೇಲ್, ದೂರವಾಣಿ ಮೂಲಕ ಸಂಪರ್ಕಿಸಬಹುದು ಎಂದು ಜೆಎಸ್‍ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.