Recent Posts

October 16, 2021

Chitradurga hoysala

Kannada news portal

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

1 min read

ಚಿತ್ರದುರ್ಗ,ಆ.24:
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೌಡನಹಳ್ಳಿ ಗ್ರಾಮ ಪಂಚಾಯಿತಿ ಗ್ರಂಥಾಲಯದ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 21 ಕೊನೆಯ ದಿನ.
ಗೌಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ವಿಚಾರಕರನ್ನು ಮಾಸಿಕ ಗೌರವ ಧನ ರೂ.7,000/- (ರೂ. ಏಳು ಸಾವಿರ ಮಾತ್ರ) ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಮೇಲ್ವಿಚಾರಕರ ಸ್ಥಾನವು ಪ್ರವರ್ಗ-2ಎ (ಮಹಿಳೆ) ಅಭ್ಯರ್ಥಿಗೆ ಮೀಸಲಾಗಿರುತ್ತದೆ. ಅರ್ಜಿಗಳನ್ನು ದಾಖಲಾತಿಗಳೊಂದಿಗೆ ನಿಗದಿತ ದಿನಾಂಕ ಸೆಪ್ಟಂಬರ್ 21ರೊಳಗೆ ಪಿ.ಡಿ.ಓ ಅಥವಾ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳಿಗೆ ಸಲ್ಲಿಸಬೇಕು.
ಅರ್ಹತಾ ಷರತ್ತುಗಳು: ಅಭ್ಯರ್ಥಿಯು ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾಗಿರಬೇಕು, ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿರಬೇಕು, ನಿಗದಿ ಪಡಿಸಿದ ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಭರ್ತಿಮಾಡಿದ ಅರ್ಜಿಗಳನ್ನು ಸೂಕ್ತ ದಾಖಲಾತಿ (ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಟಿಸಿ, ಮೀಸಲಾತಿ ಪ್ರಮಾಣ ಪತ್ರ, ಸ್ಥಳೀಯ ನಿವಾಸಿ ದೃಢೀಕರಣ ಪತ್ರ, ಅಂಗವಿಕಲತೆ ಇದ್ದಲಿ ದೃಢೀಕರಣ ಪತ್ರ ಸಲ್ಲಿಸಬೇಕು.  ವಯಸ್ಕರ ಶಿಕ್ಷಣದಡಿ ನಡೆಯುತ್ತಿರುವ ಮುಂದುವರಿಕಾ ಕಲಿಕಾ ಕೇಂದ್ರದ ಪ್ರೇರಕ, ಉಪಪ್ರೇರಕರು ಸಹ ಅರ್ಜಿಗಳನ್ನು ಸಲ್ಲಿಸಬಹುದು. ಮೇಲ್ವಿಚಾರಕರಾಗಿ ನೇಮಕಗೊಂಡ ನಂತರ ಪ್ರೇರಕ, ಉಪಪ್ರೇರಕ ಹುದ್ದೆಗೆ ರಾಜೀನಾಮೆ ನೀಡತಕ್ಕದ್ದು. ಬಿಡುಗಡೆ ಪತ್ರವನ್ನು ಸಂಬಂಧಿಸಿದ ಇಲಾಖೆಯಿಂದ ಪಡೆದು ಈ ಕಚೇರಿಗೆ ಸಲ್ಲಿಸತಕ್ಕದ್ದು. ಪ್ರೇರಕ, ಉಪಪ್ರೇರಕರಿಗೆ ಮೀಸಲಾತಿ ಅನ್ವಯಿಸುತ್ತದೆ. ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು. ಗರಿಷ್ಟ ವಯೋಮಿತಿ 38 ವರ್ಷ ಒಳಗಿನವರಾಗಿರಬೇಕು. ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು,

ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ಜಿಲ್ಲಾ ಕೇಂದ್ರ ಗ್ರಂಥಾಲಯವನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed