ಕಮಲ ಮುಡಿದ ಕರ್ನಾಟಕದ ರಿಯಲ್ ಸಿಗಂ ಅಣ್ಣಾಮಲೈ
1 min readನವದೆಹಲಿ: ಕರ್ನಾಟಕದ ರಿಯಲ್ ಸಿಂಗಂ ಎಂದೇ ಖ್ಯಾತರಾಗಿದ್ದ ಮಾಜಿ ಐಪಿಎಸ್ ಖಡಕ್ ಅಧಿಕಾರಿ ಕೆ. ಅಣ್ಣಾಮಲೈ ಇಂದು(ಮಂಗಳವಾರ) ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ನವದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಮ್ಮುಖದಲ್ಲಿ ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆಗೊಂಡರು.
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ. ಮುರುಳಿಧರ್ ರಾವ್ ಸಮ್ಮುಖದಲ್ಲಿ ಅಣ್ಣಾಮಲೈ ಬಿಜೆಪಿ ಸೇರ್ಪಡೆಗೊಂಡರು. ಮುರುಳಿಧರ್ ರಾವ್ ಅಣ್ಣಾಮಲೈ ಅವರನ್ನು ತುಂಬಾ ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಂಡರು.
ಅಣ್ಣಾಮಲೈ ಅವರನ್ನು ಸ್ವಾಗತಿಸಿ ಮಾತನಾಡಿದ ಮುರುಳಿಧರ್ ರಾವ್, ತಮ್ಮ ಪ್ರಾಮಾಣಿಕತೆ ಹಾಗೂ ನಿಷ್ಠುರ ಕಾರ್ಯವೈಖರಿಗೆ ಹೆಸರಾಗಿದ್ದು ಅಣ್ಣಾಮಲೈ ಅವರನ್ನು ಪಕ್ಷಕ್ಕೆ ಸ್ವಾಗತಿಸಲು ಅತೀವ ಸಂತೋಷವಾಗುತ್ತಿದೆ ಎಂದು ಹೇಳಿದರು. ಅವರು ಪ್ರಮಾಣಿಕತೆ ಕಾರ್ಯವನ್ನು ಜನರು ಎಂದು ಸಹ ಮರೆಯುವುದಿಲ್ಲ ಅಂತವರು ಪಕ್ಷಕ್ಕೆ ಬಂದಿರುವುದು ಉತ್ತಮ ಬೆಳವಣಿಗೆ ಎಂದರು.
ಇನ್ನು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡು ಮಾತನಾಡಿದ ಅಣ್ಣಾಮಲೈ ಬಿಜೆಪಿಯ ರಾಷ್ಟ್ರವಾದ ಹಾಗೂ ಅಭಿವೃದ್ಧಿ ಸಿದ್ಧಾಂತಗಳನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವುದಾಗಿ ಸ್ಷಷ್ಟಪಡಿಸಿದರು.