ಕೈಮಗ್ಗ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ
1 min readಚಿತ್ರದುರ್ಗ, ಆಗಸ್ಟ್ 26: 2020-21ನೇ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್ ಕಲಿಕೆಗಾಗಿ 42 ಆಯ್ಕೆ ಮಾಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 10 ಅರ್ಜಿ ಸಲ್ಲಿಸಲು ಕೊನೆಯ ದಿನ. ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿ ಪ್ರಕಾರ ಪ್ರತಿ ವಿದ್ಯಾರ್ಥಿಗೆ, ಪ್ರತಿ ತಿಂಗಳು ರೂ.1000/- ರಿಂದ 1200/- ರವರೆಗೆ ಶಿಷ್ಯ ವೇತನ ನೀಡಲಾಗುವುದು. ಹಾಗೂ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು. ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್‍ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2020 ಜುಲೈ 1ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23ರ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗದ ಅಭ್ಯರ್ಥಿಗಳು 15 ರಿಂದ 25ರ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೂಢೀಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತದೆ. ಡಿಪ್ಲೋಮಾ ಕೋರ್ಸ್‍ಗಾಗಿ ಲಭ್ಯವಿರುವ ಸಂಸ್ಥೆಗಳ ವಿವರ: ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ (ಕರ್ನಾಟಕ)-22 ಅಭ್ಯರ್ಥಿಗಳು, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ (ತಮಿಳುನಾಡು)-15 ಅಭ್ಯರ್ಥಿಗಳು, ಎಸ್‍ಪಿಕೆಎಂ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ, (ನೆಲ್ಲೂರು ಜಿಲ್ಲೆ, ಆಂಧ್ರಪ್ರದೇಶ)-03 ಅಭ್ಯರ್ಥಿಗಳು ಹಾಗೂ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು (ಕೇರಳ)-02 ಅಭ್ಯರ್ಥಿಗಳು ಸೇರಿದಂತೆ ಒಟ್ಟು 42 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸ್‍ಲಿಂಗ್‍ಗಾಗಿ ಕರೆಯಲಾಗುವುದು. ಆಸಕ್ತಿ ಇರುವ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ಫಾರಂಗಳಿಗಾಗಿ ಉಪನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಭಾಗ್ಯ ಕಾಂಪ್ಲೆಕ್ಸ್, ಬಿ.ಡಿ. ರಸ್ತೆ, ಚಿತ್ರದುರ್ಗ, ದೂರವಾಣಿ-08194-221426 ಇವರನ್ನು ಸಂಪರ್ಕಿಸಿ ಪಡೆಯಬಹುದು. ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳಣ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕಚೇರಿಗೆ ಸೆಪ್ಟೆಂಬರ್ 5ರೊಳಗಾಗಿ ಅಥವಾ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-582102 ದೂರವಾಣಿ-08372-297221 ಇವರ ಕಚೇರಿಗೆ ನೇರವಾಗಿ ಸೆಪ್ಟೆಂಬರ್ 10ರೊಳಗೆ ಸಲ್ಲಿಸುವಂತೆ ಚಿತ್ರದುರ್ಗ ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.