ತೋಟಗಾರಿಕೆ ಬೆಳೆಗಳು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
1 min readತೋಟಗಾರಿಕೆ ಬೆಳೆಗಳು: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ****ಚಿತ್ರದುರ್ಗ,ಆಗಸ್ಟ್ 29: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಸಂಬಂಧಿಸಿದ ವಿವಿಧ ಕಾಮಗಾರಿಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿದೆ.ಪ್ರಸಕ್ತ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳ ವಿಸ್ತರಣೆ , ಮಣ್ಣು ಮತ್ತು ನೀರು ಸಂರಕ್ಷಣೆಗೆ ಸಂಬಂಧಿಸಿದ ಕಾಮಗಾರಿಗಳ ಅನುಷ್ಟಾನಗೊಳಿಸಲಾಗುತ್ತಿದ್ದು. ತೋಟಗಾರಿಗೆ ಬೆಳೆಗಳಾದ ತೆಂಗು, ಮಾವು, ಸಪೋಟ, ದಾಳಿಂಬೆ, ಸೀಬೆ, ನಿಂಬೆ, ಹುಣಸೆ, ನುಗ್ಗೆ, ನೇರಳೆ, ಕಾಳುಮೆಣಸು, ಸೀತಾಫಲ, ನೆಲ್ಲಿ, ಗುಲಾಬಿ ಹೂ, ಮತ್ತು ಮಲ್ಲಿಗೆ ಹೂ, ಅಭಿವೃದ್ಧಿ ಪಡಿಸಲು ಹಾಗೂ ತೆಂಗು ಪುನಃಶ್ಚೇತನ, ಮಾವು ಪುನಃಶ್ಚೇತನ, ಕೊಳವೆಬಾವಿ ಮರುಪೂರಣ, ಬದು ನಿರ್ಮಾಣ, ಕಾಮಗಾರಿಗಳಿಗೆ ಅರ್ಜಿ ಸಲ್ಲಿಸಿ ಸಹಾಯಧನ ಪಡೆಯಬಹುದಾಗಿದೆ.ಈ ಯೋಜನೆ ಸಹಾಯಧನ ಪಡೆಯಲು ಬಿಪಿಎಲ್ ಕಾರ್ಡ್ ಹೊಂದಿದವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಣ್ಣ, ಅತೀ ಸಣ್ಣ ರೈತರು ಈ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಆಸಕ್ತ ರೈತರು ಸಂಬಂಧಪಟ್ಟ ತಾಲ್ಲೂಕು ಕಚೇರಿಯಲ್ಲಿ ನರೇಗಾ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಚಿತ್ರದುರ್ಗ-08194-231480, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಚಳ್ಳಕೆರೆ-08195-250432, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಹಿರಿಯೂರು-08193-260305, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಹೊಳಲ್ಕೆರೆ-08191-276370, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಹೊಸದುರ್ಗ-08197-230790, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಮೊಳಕಾಲ್ಮುರು-08198-229080 ಕ್ಕೆ ಆಯಾ ತಾಲ್ಲೂಕಿನ ರೈತರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರವರ ಸಹಾಯವಾಣಿಯನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.========