April 28, 2024

Chitradurga hoysala

Kannada news portal

ಉತ್ತಮ ಸಾಧನೆ ಮಾಡಿದ ಹಿರಿಯ ನಾಗರೀಕರಿಗೆ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ: ಜೆ.ವೈಶಾಲಿ

1 min read

ಚಿತ್ರದುರ್ಗ,ಆಗಸ್ಟ್.29:ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ವಯೋಶ್ರೇಷ್ಠರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 7 ಕೊನೆಯ ದಿನ.ಅಕ್ಟೋಬರ್ 1 ರಂದು ವಿಶ್ವ ಹಿರಿಯ ನಾಗರಿಕ ದಿನಾಚರಣೆಯನ್ನು ರಾಜ್ಯಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ (ಶಿಕ್ಷಣ ಕ್ಷೇತ್ರ, ಸಾಹಿತ್ಯ, ಕಲಾ ಕ್ಷೇತ್ರ, ಕಾನೂನು, ಪ್ರತಿಭೆ, ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ) ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 06 ವೈಯಕ್ತಿಕ ಪ್ರಶಸ್ತಿಗಳನ್ನು ಹಾಗೂ ಹಿರಿಯ ನಾಗರಿಕ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 01 ಸಂಸ್ಥೆಗೆ ಪ್ರಶಸ್ತಿ ಸೇರಿದಂತೆ ಒಟ್ಟು 07 ಪ್ರಶಸ್ತಿಗಳನ್ನು ನೀಡಲಾಗುತ್ತದೆ.ಚಿತ್ರದುರ್ಗ ಜಿಲ್ಲೆಯಲ್ಲಿ ಶಿಕ್ಷಣ ಕ್ಷೇತ್ರ, ಸಾಹಿತ್ಯ, ಕಲಾ ಕ್ಷೇತ್ರ , ಕಾನೂನು, ಪ್ರತಿಭೆ, ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ಹಾಗೂ ಹಿರಿಯ ನಾಗರಿಕ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಅರ್ಹ ಸಂಸ್ಥೆಗಳಿಂದ ಪ್ರತ್ಯೇಕವಾಗಿ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು ಕಚೇರಿಯಿಂದ ಅರ್ಜಿ ನಮೂನೆಗಳನ್ನು ಪಡೆದು ಸೆಪ್ಟಂಬರ್ 7 ರೊಳಗೆ ಅರ್ಜಿ ನಮೂನೆಯಲ್ಲಿ ಪೂರ್ಣ ವಿವರವನ್ನು ಕನ್ನಡದಲ್ಲಿಯೇ ಭರ್ತಿ ಮಾಡಿ, ಅರ್ಜಿ ನಮೂನೆ ಹಾಗೂ ಪ್ರಸ್ತಾವನೆಯನ್ನು ದ್ವಿ ಪ್ರತಿಯಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸ್ಟೇಡಿಯಂ ಹತ್ತಿರ, ಬಾಲಭವನ ಆವರಣ, ಚಿತ್ರದುರ್ಗ ಈ ಕಚೇರಿಗೆ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ 08194-235284/86 ಸಂಪರ್ಕಿಸಬಹುದು ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *