ಜಿಲ್ಲೆಯಲ್ಲಿ 90 ಜನರಿಗೆ ಕೋವಿಡ್ ಸೋಂಕು ದೃಢ : ಸೋಂಕಿತರ ಸಂಖ್ಯೆ 2,513 ಕ್ಕೆ ಏರಿಕೆ
1 min readಚಿತ್ರದುರ್ಗ ಆಗಸ್ಟ್ 29:
ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಶನಿವಾರದ ವರದಿಯಲ್ಲಿ 90 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2,513 ಕ್ಕೆ ಏರಿಕೆಯಾದಂತಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 21, ಹಿರಿಯೂರು-04, ಚಳ್ಳಕೆರೆ-29, ಮೊಳಕಾಲ್ಮುರು 14, ಹೊಸದುರ್ಗ 10 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 12 ಸೇರಿದಂತೆ ಒಟ್ಟು 90 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಶನಿವಾರ 34 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಶನಿವಾರ ಒಟ್ಟು 849 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 90 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 2,513 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 34 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 1,693 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 785 ಸಕ್ರಿಯ ಪ್ರಕರಣಗಳು ಇವೆ.
ಸದ್ಯ ಜಿಲ್ಲೆಯಲ್ಲಿ ಒಟ್ಟು 603 ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 19,507 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 37,411 ಜನರ ಮಾದರಿ ಸಂಗ್ರಹಿಸಲಾಗಿದ್ದು, 33,200 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 1,277 ಜನರ ವರದಿ ಬರುವುದು ಬಾಕಿ ಇದೆ. 421 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
==========