ಗಾಲಿ ಜನಾರ್ದನರೆಡ್ಡಿಗೆ ಕೋವಿಡ್ ಸೋಂಕು ದೃಢ
1 min readಬೆಂಗಳೂರು: ಮಾರ್ಚ್ 29: ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಕುರಿತು ಅವರೇ ಖುದ್ದಾಗಿ ಮಾಹಿತಿ ನೀಡಿದ್ದು, ಇಂದು ಸಂಜೆ ನನಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ತಿಳಿಸಿದ್ದಾರೆ.
ಈ ಕಾರಣದಿಂದ ಆಗಸ್ಟ್ 30 ರಂದು ತನ್ನ ಆತ್ಮ ಸ್ನೇಹಿತ ಸಚಿವ ಶ್ರೀರಾಮುಲು ಅವರ ತಾಯಿಯವರ ಪುಣ್ಯ ತಿಥಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಾಗುತ್ತಿಲ್ಲ.
ಆಸ್ಪತ್ರೆಯಲ್ಲಿ ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಯಾವುದೇ ಲಕ್ಷಣಗಳೂ ಇಲ್ಲ. ಎಲ್ಲರ ಆಶೀರ್ವಾದದಿಂದ ಆದಷ್ಟು ಬೇಗ ಗುಣಮುಖನಾಗುತ್ತೇನೆ ಎಂದು ತಿಳಿಸಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿ ಬಿಎಎಸ್ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೂ ಕೂಡ ಕೊರೊನಾ ಸೋಂಕು ತಗುಲಿತ್ತು. ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೂಡ ಕೊರೊನಾ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.