April 24, 2024

Chitradurga hoysala

Kannada news portal

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಮೂವರು ಅಧಿಕಾರಿಗಳು ಅಮಾನತು

1 min read

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ಮೂವರು ಅಧಿಕಾರಿಗಳನ್ನು ಅಮಾನತು ಗೊಳಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮದವರ ಜೊತೆ ಪ್ರತಿಕ್ರಿಯಿಸಿದ ಕಾರಜೋಳ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ಮೂವರು ಅಧಿಕಾರಿಗಳನ್ನು ಭೂ ಒಡೆತನ ಯೋಜನೆಯಲ್ಲಿ ಲಂಚ ಪಡೆದ ಆರೋಪದಡಿ ಭ್ರಷ್ಟಾಚಾರ ನಿಗ್ರಹ ದಳವು (ಎಸಿಬಿ) ಬಂಧಿಸಿದ್ದು, ಈ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಸ್ಪಷ್ಟಪಡಿಸಿದರು.

ನಿಗಮದ ಪ್ರಧಾನ ವ್ಯವಸ್ಥಾಪಕ ಎಸ್.ಎಸ್. ನಾಗೇಶ್, ಸಹಾಯಕ ಪ್ರಧಾನ ವ್ಯವಸ್ಥಾಪಕಾದ ಮಂಜುಳ ಮತ್ತು ಕಚೇರಿ ಅಧೀಕ್ಷಕ ಪಿ.ಡಿ. ಸುಬ್ಬಪ್ಪ ಅವರು ಕರ್ನಾಟಕ ನಾಗರಿಕ ಸೇವಾ ನಿಯಮದನ್ವಯ ಕರ್ತವ್ಯ ಲೋಪವೆಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಇವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದ್ದು, ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿ ಅಮಾನತು ಮಾಡಲಾಗಿದೆ ಎಂದು ಹೇಳಿದರು.

ಅಮಾನತಿನ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೇ ಕೇಂದ್ರಸ್ಥಾನ ಬಿಡಬಾರದು ಎಂದು ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ನಿಗಮದ ಕಚೇರಿ ಹಾಗೂ ಇಬ್ಬರು ವ್ಯಪಸ್ಥಾಪಕರ ಮನೆಯಲ್ಲಿ ಒಟ್ಟು 82 ಲಕ್ಷ ರೂ.ಗಳನ್ನು ಎಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಕಡಿಮೆ ಬೆಲೆಗೆ ಭೂಮಿ ಖರೀದಿಸಿ ಅದಕ್ಕೆ ಹೆಚ್ಚಿನ ಬೆಲೆಯನ್ನು ನಮೂದಿಸುತ್ತಿದ್ದರು. 

ಇದೇ ರೀತಿಯಲ್ಲಿ ರಾಯಚೂರು ಜಿಲ್ಲೆಗೆ 8 ಕೋಟಿ ರೂ.ಗಳನ್ನು ಮಂಜೂರು ಮಾಡಲು ಕಡತ ಸಿದ್ಧಪಡಿಸಲಾಗಿತ್ತು. ಇದರಲ್ಲಿ 56 ಲಕ್ಷ ರೂ. ಲಂಚದ ಹಣ ಕಚೇರಿ ಅಧೀಕ್ಷಕ ಸುಬ್ಬಪ್ಪ ಕೈ ಸೇರಲಿದೆ ಎಂಬ ಮಾಹಿತಿ ಮೇರೆಗೆ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದರು.

About The Author

Leave a Reply

Your email address will not be published. Required fields are marked *