May 19, 2024

Chitradurga hoysala

Kannada news portal

ಗ್ರಾಮ ಪಂಚಾಯತಿ ಚುನಾವಣಾ ಅಂತಿಮ‌ ಮತದಾರ ಪಟ್ಟಿ ರಿಲೀಸ್

1 min read

ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ತಿಳಿಸಿದ್ದಾರೆ.
ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ-2020ರ ಸಂಬಂಧ ರಾಜ್ಯ ಚುನಾವಣಾ ಆಯೋಗದ ಸುತ್ತೋಲೆಯನ್ವಯ ಗ್ರಾಮ ಪಂಚಾಯಿತಿಯ ಕ್ಷೇತ್ರವಾರು ಕರಡು ಮತದಾರರ ಪಟ್ಟಿಯನ್ನು 2020ರ ಆಗಸ್ಟ್ 7ರಂದು ನಿಗಧಿತ ಸ್ಥಳಗಳಲ್ಲಿ ಪ್ರಚುರಪಡಿಸಲಾಗಿತ್ತು.
ಮತದಾರರ ಪಟ್ಟಿಗಳಲ್ಲಿ ಮತದಾರರ ಹೆಸರು ತಾವು ವಾಸವಿರುವ ಕ್ಷೇತ್ರದ ವ್ಯಾಪ್ತಿಯಲ್ಲಿ ಇರದೆ ಬೇರೆ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಲ್ಲಿ ಆ ಬಗ್ಗೆ ಆಕ್ಷೇಪಣೆ ಸಲ್ಲಿಸಬಹುದು ಹಾಗೂ ನಗರ ಪ್ರದೇಶದ ಮತದಾರರ ಹೆಸರನ್ನು ಅಥವಾ ವಿಧಾನಸಭಾ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗದೇ ಇರುವ ಹೆಸರುಗಳನ್ನು ಗ್ರಾಮ ಪಂಚಾಯಿತಿಗೆ ತಯಾರಿಸಲಾಗಿರುವ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಲ್ಲಿ ಮಾತ್ರ ಆಕ್ಷೇಪಣೆಗಳನ್ನು 2020ರ ಆಗಸ್ಟ್ 14ರೊಳಗೆ ಸಲ್ಲಿಸಲು ಸೂಚಿಸಲಾಗಿತ್ತು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

About The Author

Leave a Reply

Your email address will not be published. Required fields are marked *